ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
1 min readಚಿತ್ರದುರ್ಗ,ಆಗಸ್ಟ್.31:ಪ್ರಸಕ್ತ ಸಾಲಿನ ಆತ್ಮ ಯೋಜನೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 15 ಅರ್ಜಿ ಸಲ್ಲಿಸಲು ಕೊನೆಯ ದಿನ.ಜಮೀನು ಹೊಂದಿರುವ ಆಸಕ್ತ ಕೃಷಿಕ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ರೈತರು ಹಾಗೂ ರೈತ ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬಹುದು.ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಾಗಿ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಆತ್ಮ ಯೋಜನೆಯ ಯೋಜನಾ ನಿರ್ದೇಶಕರು ಹಾಗೂ ಉಪ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.