April 26, 2024

Chitradurga hoysala

Kannada news portal

ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಆಡಳಿತ ನ್ಯಾಯಾಧೀಕರಣ ತರಬೇತಿಗೆ ಅರ್ಜಿ ಆಹ್ವಾನ

1 min read

ಚಿತ್ರದುರ್ಗ,ಆಗಸ್ಟ್.31:ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ನೀಡಲು ಪರಿಶಿಷ್ಟ ವರ್ಗದ ಕಾನೂನು ಪದವೀಧರರನ್ನು ಆಯ್ಕೆ ಮಾಡಲು ಪ್ರಸಕ್ತ ಸಾಲಿಗೆ ಅರ್ಜಿ ಆಹ್ವಾನ. ಸೆಪ್ಟೆಂಬರ್ 28 ಅರ್ಜಿ ಸಲ್ಲಿಸಲು ಕೊನೆಯ ದಿನ.2020-21ನೇ ಸಾಲಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ನೀಡಲು ಪರಿಶಿಷ್ಟ ವರ್ಗದ ಕಾನೂನು ಪದವೀಧರರನ್ನು ಆಯ್ಕೆ ಮಾಡಲು ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಗಧಿತ ಅರ್ಜಿ ನಮೂನೆಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಳ ಕಚೇರಿ, ಚಿತ್ರದುರ್ಗ, ಇಲ್ಲಿ ಕಚೇರಿ ವೇಳೆಯಲ್ಲಿ ಆಗಸ್ಟ್ 31 ರಿಂದ ಸೆಪ್ಟೆಂಬರ್ 25ರ ವರೆಗೆ ಅರ್ಜಿಗಳನ್ನು ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ 28ರ ಸಂಜೆ 5.30ರೊಳಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಚಿತ್ರದುರ್ಗ ಇಲ್ಲಿಗೆ ಸಲ್ಲಿಸಬೇಕು.ಅರ್ಹತೆಗಳು: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪರಿಶಿಷ್ಟ ವರ್ಗಕ್ಕೆ ಸೇರಿದವರಾಗಿರಬೇಕು. ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕಕ್ಕೆ ಕಾನೂನು ಪದವಿಯನ್ನು ಪಡೆದು 2 ವರ್ಷ ಮೀರಿರಬಾರದು. ತರಬೇತಿಯನ್ನು ಚಿತ್ರದುರ್ಗ ಜಿಲ್ಲೆಯಲ್ಲೇ ಪಡೆಯಬೇಕು. ಅರ್ಜಿ ಸಲ್ಲಿಸುವ ದಿನಾಂಕದಂದು ಅಭ್ಯರ್ಥಿಯ ವಯಸ್ಸು 40 ಮೀರಿರಬಾರದು. ಆಯ್ಕೆಯಾದ ತರಬೇತಿ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಸರ್ಕಾರದ ಆದೇಶದನ್ವಯ ಶಿಷ್ಯ ವೇತನವನ್ನು ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ ಸರ್ಕಾರಿ ವಕೀಲರು ಅಥವಾ 20 ವರ್ಷಗಳ ಕಾಲ ಕಡಿಮೆ ಇಲ್ಲದ ವಕೀಲ ವೃತ್ತಿಯಲ್ಲಿ ಸೇವೆ ಸಲ್ಲಿಸಿರುವ ನ್ಯಾಯವಾದಿಗಳ ಬಳಿ ತರಬೇತಿಯನ್ನು ಹಾಗೂ ಯಾರ ಬಳಿ ತರಬೇತಿಯನ್ನು ಪಡೆಯಲು ಇಚ್ಚಿಸುತ್ತೀರಿ ಎಂಬ ಬಗ್ಗೆ ಲಿಖಿತ ರೂಪದಲ್ಲಿ ತಿಳಿಸಬೇಕು. ತರಬೇತಿ ಅವಧಿಯು 2 ವರ್ಷವಿದ್ದು ಆಯ್ಕೆಯಾದ ಅಭ್ಯರ್ಥಿಗಳು ತರಬೇತಿ ಮಧ್ಯದಲ್ಲಿ ಬಿಡುವಂತಿಲ್ಲ. ಒಂದು ವೇಳೆ ಬಿಟ್ಟರೆ ತರಬೇತಿ ಅವಧಿಯಲ್ಲಿ ಪಡೆದಿರುವ ಶಿಷ್ಯ ವೇತನವನ್ನು ಶೇ.10 ಬಡ್ಡಿಯೊಂದಿಗೆ ಸರ್ಕಾರಕ್ಕೆ ಹಿಂದಿರುಗಿಸುವುದಾಗಿ ಮುಚ್ಚಳಿಕೆ ಬರೆದು ಕೊಡಬೇಕು. ಈ ನಿಯಮ ರಾಜ್ಯ ಅಥವಾ ಕೇಂದ್ರ ಸರ್ಕಾರದ ನೌಕರಿ ಪಡೆಯುವವವರಿಗೆ ಅನ್ವಹಿಸುವುದಿಲ್ಲ. ಆಯ್ಕೆಯಾದ ಅಭ್ಯರ್ಥಿಗಳು ಸುಳ್ಳು ಮಾಹಿತಿ ಹಾಗೂ ಸುಳ್ಳು ದಾಖಲೆಗಳನ್ನು ನೀಡಿ ಆಯ್ಕೆಯಾದರೆ ಶಿಷ್ಯವೇತನ ಪಡೆದರೆ ಅಂತಹ ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ಪಡೆದ ಶಿಷ್ಯವೇತನವನ್ನು 10 % ಬಡ್ಡಿಯೊಂದಿಗೆ ಸರ್ಕಾರಕ್ಕೆ ಹಿಂದಿರುಗಿ ಕಟ್ಟಬೇಕು ತಪ್ಪದರೆ ಭೂ ಕಂದಾಯ ಬಾಕಿ ವಸೂಲಿಯಂತೆ ವಸೂಲಿ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ನಿಗಧಿತ ದಿನಾಂಕದೊಳಗೆ ಹಾಜರಾಗದಿದ್ದರೆ ಅಂತಹವರ ಆಯ್ಕೆಯನ್ನು ರದ್ದು ಪಡಿಸಲಾಗುವುದು. ಪರಿಶಿಷ್ಟರ ವರ್ಗದ ಕಾನೂನು ಪದವೀಧರರ ವಾರ್ಷಿಕ ವರಮಾನ ಮೊತ್ತ ರೂ. 2,50,000 ಒಳಗಡೆ ಇರಬೇಕು. ಅರ್ಜಿಯೊಂದಿಗೆ ಸಲ್ಲಿಸಿರುವ ಎಲ್ಲಾ ದಾಖಲಾತಿಗಳನ್ನು ಗೆಜೆಟೆಡ್ ಅಧಿಕಾರಿಗಳಿಂದ ಧೃಢೀಕರಿಸಬೇಕು, ತಪ್ಪಿದ್ದಲ್ಲಿ ಅಂತ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *