March 3, 2024

Chitradurga hoysala

Kannada news portal

ಎಸ್‍ಎಸ್‍ಎಲ್‍ಸಿ ಫಲಿತಾಂಶ: ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಲ್ಲಿ ಶೇ.100 ಸಾಧನೆ

1 min read

ಚಿತ್ರದುರ್ಗ,ಆಗಸ್ಟ್.31:ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ  ಶೇ.100 ರಷ್ಟು ಫಲಿತಾಂಶ ಪಡೆದಿವೆ. 2020-21ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಚಳ್ಳಕೆರೆ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ 09 ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳು ಕಾರ್ಯನಿರ್ವಹಿಸುತ್ತಿದ್ದು, ಚಳ್ಳಕೆರೆ ಟೌನ್, ಕಾಲುವೇಹಳ್ಳಿ, ಪರಶುರಾಂಪುರ, ಜಾಜೂರು, ಮೀರಸಾಬಿಹಳ್ಳಿ ರಾಮಜೋಗಿಹಳ್ಳಿ, ಪರುಶುರಾಂಪುರ ವಿದ್ಯಾರ್ಥಿನಿಲಯಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.100 ಸಾಧನೆ ಮಾಡಿವೆ.ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಳ ವಿವರ ಇಂತಿದೆ. ಪರಶುರಾಂಪುರ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಗಳಾದ ಎಂ.ಅನುಷ (ಶೇ.93.12), ಆರ್.ಶಾಂಭವಿ (ಶೇ.92.48), ಸಿ. ಕಾವ್ಯ(92.32), ರಾಮಜೋಗಿಹಳ್ಳಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿ ಎನ್. ಸಂಜಯ್ಯ (ಶೇ.85.76) ಗೌರಸಮುದ್ರ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿ ಜಗದೀಶ (ಶೇ.85.28) ಫಲಿತಾಂಶ ಪಡೆದಿದ್ದಾರೆ.  ಚಳ್ಳಕೆರೆ ತಾಲ್ಲೂಕಿನಾದ್ಯಂತ ಇರುವ ವಿದ್ಯಾರ್ಥಿನಿಲಯಳಿಂದ ಒಟ್ಟು ಶೇ.98 ರಷ್ಟು ಫಲಿತಾಂಶ ಬಂದಿರುತ್ತದೆ. ಉನ್ನತಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೂ ಹಾಗೂ ನಿಲಯ ಮೇಲ್ವಿಚಾರಕರಿಗೆ ಸಮಾಜ ಕಲ್ಯಾಣ ಇಲಾಖೆಯು ಅಭಿನಂದಿಸುತ್ತದೆ ಎಂದು ಚಳ್ಳಕೆರೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *