May 23, 2024

Chitradurga hoysala

Kannada news portal

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ

1 min read

ಚಿತ್ರದುರ್ಗ, ಆ.31:
 ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿವಿಧ ಯೋಜನೆಗಳಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲಾಗುತ್ತಿದೆ ಎಂದು ಚಿತ್ರದುರ್ಗ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಓ.ಪರಮೇಶ್ವರಪ್ಪ ತಿಳಿಸಿದ್ದಾರೆ.
 2020-21ನೇ ಸಾಲಿನ ಆಯವ್ಯಯ ಘೋಷಣೆಯಲ್ಲಿ ಸ್ವಾತಂತ್ರ್ಯ ಹೋರಾಟದ ಭಾಗವಾದ ಹಲಗಲಿ ಬೇಡರ ಬಂಡಾಯದಲ್ಲಿ ಹುತಾತ್ಮರಾದ ಜಡಗ ಮತ್ತು ಬಾಲ ಇವರ ಹೆಸರಿನಲ್ಲಿ ಪ್ರತಿ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ರೂ.1 ಲಕ್ಷ ನಗದು ಪ್ರೋತ್ಸಾಹಧನ ಪ್ರಶಸ್ತಿ ಮಂಜೂರು ಮಾಡಲಾಗುವುದು. ಪ್ರೋತ್ಸಾಹಧನದ ಮೊತ್ತವನ್ನು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗುವುದು. ಆದ್ದರಿಂದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ.
ಜೂನ್-ಜುಲೈ ತಿಂಗಳಲ್ಲಿ ಎಸ್‍ಎಸ್‍ಎಲ್‍ಸಿ ಪ್ರಥಮ ಪ್ರಯತ್ನದಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಪ್ರೋತ್ಸಾಹಧನ ಯೋಜನೆಯನ್ನು 2020-21ನೇ ಸಾಲಿನಿಂದ ಡಿಬಿಟಿ ಮೂಲಕ ಅನುಷ್ಠಾನ ಮಾಡಲು ಅನುಮತಿ ನೀಡಲಾಗಿರುವುದರಿಂದ ಪ್ರೋತ್ಸಾಹಧನವನ್ನು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮೆ ಮಾಡಲಾಗುವುದು. ಆದ್ದರಿಂದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಅಗತ್ಯವಿಲ್ಲ.
ಪ್ರಸಕ್ತ ಸಾಲಿನಲ್ಲಿ ಪ್ರಥಮ ದರ್ಜೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಮಾತ್ರ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ www.sw.kar.nic.in ಹಾಗೂ ವಿಷಯ ನಿರ್ವಾಹಕ ಜಿ.ಜಿ. ಶರತ್ ಕುಮಾರ್, ಮೊಬೈಲ್: 9480843107 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.    


About The Author

Leave a Reply

Your email address will not be published. Required fields are marked *