October 16, 2024

Chitradurga hoysala

Kannada news portal

ಕುಂಚಿಗನಾಳ್ ಬಳಿ 25 ಕೋಟಿ ವೆಚ್ಚದಲ್ಲಿ ಸಕಲ ಸೌಲಭ್ಯಗಳನ್ನು ಒಳಗೊಂಡ ಜಿಲ್ಲಾಧಿಕಾರಿ ಕಟ್ಟಡ ನಿರ್ಮಾಣ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

1 min read

ಚಿತ್ರದುರ್ಗ: ಚಿತ್ರದಯರ್ಗ ಸಮೀಪದ ಬೆಂಗಳೂರು ರಸ್ತೆಯಲ್ಲಿನ ಇಂಗಳದಾಳ್ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಕುಂಚಿಗನಾಳ್ ಕಣಿವೆಯ ಗುಡ್ಡದ ಮೇಲ್ಭಾದಲ್ಲಿರುವ 40 ಎಕರೆ ಪ್ರದೇಶದಲ್ಲಿ 25 ಕೋಟಿ ರೂ.ಗಳ ವೆಚ್ಚದಲ್ಲಿ ಸುಂದರವಾದ ಐತಿಹಾಸಿಕ ಜಿಲ್ಲಾಧಿಕಾರಿಗಳ ಕಟ್ಟಡ ನಿರ್ಮಾಣ ಮಾಡಲಾಗುತ್ತದೆ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಹೇಳಿದರು.

ಚಿತ್ರದುರ್ಗ ನಗರದ ಹೊರವಲಯದ ಕುಂಚಿಗನಾಳ್ ಕಣಿವೆ ಗುಡ್ಡದಲ್ಲಿ ಸ್ಥಳ ಪರಿಶೀಲನೆ ಮಾಡಿ ಅವರು ಮಾತನಾಡಿದರು.
ಮುಂದಿನ ಎರಡು ವರ್ಷದಲ್ಲಿ ಭವ್ಯವಾದ ಜಿಲ್ಲಾಧಿಕಾರಿಗಳ ಕಚೇರಿ ಸಮುಚ್ಚಯ ನಿರ್ಮಾಣ ಮಾಡಬೇಕು. ವಿಶಾಲವಾದ ರಸ್ತೆ, ಬೀದಿ ದೀಪ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲ ಸೌಲಭ್ಯಗಳೊಂದಿಗೆ ನಿರ್ಮಾಣ ಮಾಡಲಾಗುತ್ತದೆ ಎಂದು ಹೇಳಿದರು.
ಚಿತ್ರದುರ್ಗ ನಗದ ಸೇರಿದಂತೆ ಸುತ್ತ ಮುತ್ತಲ ಪ್ರದೇಶಗಳಲ್ಲಿ ಹಾಸ್ಟೆಲ್ ಗಳ ಉದ್ಘಾಟನೆ, ಮುಖ್ಯ ರಸ್ತೆ ಸೇರಿದಂತೆ ಸುಮಾರು 400 ಕೋಟಿ ರೂ.ಗಳ ವಿವಿಧ ಕಟ್ಟಡಗಳ ಉದ್ಘಾಟನೆ, ಭೂಮಿ ಪೂಜೆಗಾಗಿ ಅಕ್ಟೋಬರ್ ತಿಂಗಳಲ್ಲಿ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗುತ್ತದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಕವಿಸಾ ಎಸ್.ಮನ್ನಿಕೇರಿ ಮಾತನಾಡಿ, ಕಟ್ಟಡ ನಿರ್ಮಾಣ ಆರಂಭಕ್ಕೂ ಮುನ್ನ ಯಾವುದೇ ತೊಂದರೆ ಆಗದಂತೆ ಎಚ್ಚರವಹಿಸಬೇಕು. ಆಡಳಿತಾತ್ಮಕ ಸಮಸ್ಯೆ ಇದ್ದರೆ ಕ್ಷಣದಲ್ಲಿ ನಿವಾರಣೆ ಮಾಡಿಕೊಡಲಾಗುತ್ತದೆ. ಸುಂದರ, ಭವ್ಯವಾದ ಜಿಲ್ಲಾಡಳಿತದ ಕಚೇರಿ ನಿರ್ಮಾಣಕ್ಕೆ ಈಗ ಕಾಲ ಕೂಡಿ ಬಂದಿದೆ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಸಂಗಪ್ಪ, ಉಪ ವಿಭಾಗಾಧಿಕಾರಿ ಪ್ರಸನ್ನ, ಕಾರ್ಯಪಾಲಕ ಅಭಿಯಂತರ ಸತೀಶ್ ಬಾಬು, ಸಹಾಯಕ ಕಾರ್ಯಪಾಲಕ ಅಭಿಯಂತರ ಜಿ.ಕೃಷ್ಣಪ್ಪ, ನಗರಸಭೆ ಆಯುಕ್ತ ಹನುಮಂತರಾಜು, ಸಹಾಯಕ ಕಾರ್ಯಪಾಲಕ ಅಭಿಯಂತರ ಮನೋಹರ್, ತಹಶೀಲ್ದಾರ್ ವೆಂಕಟೇಶಯ್ಯ, ತಾಲೂಕು ಸರ್ವೇಯರ್ ಹನುಮಂತರಾಯಪ್ಪ ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

About The Author

Leave a Reply

Your email address will not be published. Required fields are marked *