ವಿವಿಧ ಯೋಜನೆಯ ಸಾಲ ಸೌಲಭ್ಯದ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
1 min readಚಿತ್ರದುರ್ಗ, ಸೆಪ್ಟೆಂಬರ್ 02: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಅಲೆಮಾರಿ, ಅರೆಅಲೆಮಾರಿ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಅಭಿವೃದ್ಧಿ ಕೋಶದ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಹ ಪರಿಶಿಷ್ಟ ಜಾತಿಯ ಜನರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಕೆ ಅವಧಿಯನ್ನು ಸೆಪ್ಟೆಂಬರ್ 6ರವರೆಗೆ ವಿಸ್ತರಿಸಲಾಗಿದೆ ಎಂದು ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.