ಭದ್ರಾ ಮೇಲ್ದಂಡೆ ಯೋಜನೆ ಭೂ-ಸ್ವಾಧೀನ: ಸೆ.04 ರಂದು ಗ್ರಾಮ ಸಭೆ
1 min readಚಿತ್ರದುರ್ಗ, ಸೆಪ್ಟೆಂಬರ್ 02: ಭದ್ರಾ ಮೇಲ್ದಂಡೆ ಯೋಜನೆ ಅಡಿಯಲ್ಲಿ ಬರುವ ಚಿತ್ರದುರ್ಗ ಶಾಖಾ ಕಾಲುವೆ ನಿರ್ಮಿಸಲು ಹಿರಿಯೂರು ತಾಲ್ಲೂಕು ಗೋಗುದ್ದು ಮತ್ತು ಭರಂಪುರ ಗ್ರಾಮಗಳ ವಿವಿಧ ಸರ್ವೇ ನಂಬರ್‍ಗಳಲ್ಲಿ ಜಮೀನುಗಳ ಭೂ-ಸ್ವಾಧೀನ ಪಡಿಸಿಕೊಳ್ಳಲಾಗುತ್ತಿದ್ದು, ಸೆಪ್ಟೆಂಬರ್ 04ರಂದು ಬೆಳಿಗ್ಗೆ 11ಕ್ಕೆ ಕಲ್ಕುಂಟೆ ಕರಿಯಮ್ಮ ದೇವಸ್ಥಾನದ ಆವರಣ, ಐಮಂಗಲ, ಹಿರಿಯೂರು ತಾಲ್ಲೂಕು ಇಲ್ಲಿ ಪುನರ್ ವಸತಿ ಹಾಗೂ ಪುನರ್ ನಿರ್ಮಾಣ ಸಮತಿ ಸಮ್ಮುಖದಲ್ಲಿ ಗ್ರಾಮ ಸಭೆ ಆಯೋಜಿಸಲಾಗಿದೆ.ಸಭೆಗೆ ಸಂಸದ ಎ.ನಾರಾಯಣಸ್ವಾಮಿ, ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಅಪರ ಜಿಲ್ಲಾಧಿಕಾರಿ ಸಿ.ಸಂಗಪ್ಪ, ಭದ್ರಾ ಮೇಲ್ದಂಡೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿಗಳು, ಇಂಜಿನಿಯರ್‍ಗಳು ಹಾಗೂ ರೈತರು ಭಾಗವಹಿಸುವರು ಎಂದು ಹಿರಿಯೂರು ಕ್ಯಾಂಪ್ ಭದ್ರಾ ಮೇಲ್ದಂಡೆ ಯೋಜನೆ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.