ಹೆಲ್ತ್ ಬುಲೆಟಿನ್ : ಕೋವಿಡ್ ಓಟ ಜಿಲ್ಲೆಯಲ್ಲಿ 213 ಜನರಿಗೆ ಕೋವಿಡ್ ಸೋಂಕು ದೃಢ : ಸೋಂಕಿತರ ಸಂಖ್ಯೆ 3,258 ಕ್ಕೆ ಏರಿಕೆ.
1 min readಚಿತ್ರದುರ್ಗ, ಸೆಪ್ಟೆಂಬರ್ 02: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ 213 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3,258 ಕ್ಕೆ ಏರಿಕೆಯಾದಂತಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 70, ಹಿರಿಯೂರು-17, ಚಳ್ಳಕೆರೆ-50, ಮೊಳಕಾಲ್ಮುರು 37, ಹೊಸದುರ್ಗ 11 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 28 ಸೇರಿದಂತೆ ಒಟ್ಟು 213 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಬುಧವಾರ 15 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.ಬುಧವಾರ ಒಟ್ಟು 863 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 213 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 3,258 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 35 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 1,783 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1,440 ಸಕ್ರಿಯ ಪ್ರಕರಣಗಳು ಇವೆ. ಸದ್ಯ ಜಿಲ್ಲೆಯಲ್ಲಿ ಒಟ್ಟು 708 ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 24,674 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ 40,342 ಜನರ ಮಾದರಿ ಸಂಗ್ರಹಿಸಲಾಗಿದ್ದು, 35,527 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 1122 ಜನರ ವರದಿ ಬರುವುದು ಬಾಕಿ ಇದೆ. 435 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.