ಪಿಯುಸಿ ಪೂರಕ ಪರೀಕ್ಷೆ: ಸೋಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ನಿಗಧಿ:ಡಿಸಿ ಕವಿತಾ ಎಸ್ ಮನ್ನಿಕೇರಿ
1 min readಯುಸಿ ಪೂರಕ ಪರೀಕ್ಷೆ: ಸೋಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ನಿಗಧಿ
ಚಿತ್ರದುರ್ಗ,ಸೆಪ್ಟೆಂಬರ್.05:
ಸೆಪ್ಟೆಂಬರ್ 07 ರಿಂದ 19 ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದ್ದು ಜಿಲ್ಲೆಯಲ್ಲಿ 09 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದೆ.
ಆದರಲ್ಲಿ ಕೋವಿಡ್ ಪಾಸಿಟಿವ್ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ, ಜೋಗಿಮಟ್ಟಿ ರಸ್ತೆ, ಚಿತ್ರದುರ್ಗದಲ್ಲಿ ಕೋವಿಡ್ ಕೇಂದ್ರವನ್ನು ತೆರೆದಿರುತ್ತದೆ. ಹಾಗೂ ಪರೀಕ್ಷೆ ದಿನದಂದು ವಿದ್ಯಾರ್ಥಿಗಳು ಕುಡಿಯುವ ನೀರನ್ನು ತರಲು ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಾಪಾಡುವಂತೆ ಸೂಚಿಸಲಾಗಿದೆ. ಮತ್ತು ಪರೀಕ್ಷೆಯನ್ನು ಸುವ್ಯವಸ್ಥೆಯಾಗಿ ಎಲ್ಲಾ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.