ಎಜೆಎಂ ವಿದ್ಯಾಸಂಸ್ಥೆ ಕಂಪ್ಯೂಟರ್ ಸೈನ್ಸ್ ಮುಖ್ಯಸ್ಥ: ಡಾ.ನಾಗಭೂಷಣ್ ನಿಧನ
1 min readನಗರದ ಎಸ್.ಜೆ.ಎಂ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ನಾಗಭೂಷಣ್ (೪೫) ಅನಾರೋಗ್ಯದಿಂದ ಸೋಮವಾರ ನಿಧನರಾದರು.
ಮೃತರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಮೃತರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಬಸವಾದಿ ಪ್ರಮಥರು ಅವರ ಕುಂಟುಂಬ ವರ್ಗದವರಿಗೆ ನೀಡಲಿ ಎಂದು ಡಾ. ಶಿವಮೂರ್ತಿ ಮುರುಘಾ ಶರಣರು ಸಂತಾಪ ವ್ಯಕ್ತಪಡಿಸಿದ್ದಾರೆ. ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ.ಪರಮಶಿವಯ್ಯ, ಕಾರ್ಯನಿರ್ವಹಣಾಧಿಕಾರಿ ಎಂ.ಜಿ.ದೊರೆಸ್ವಾಮಿ ಹಾಗು ಆಡಳಿತ ಮಂಡಳಿಯ ಸದಸ್ಯರು, ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಸಿ.ಶಾಂತಪ್ಪ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಸಂತಾಪ ಸೂಚಿಸಿದ್ದಾರೆ.