ಕೋವಿಡ್-19ನಲ್ಲಿ ರಾಜ್ಯ, ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ: ಮಾಜಿ ಸಂಸದ ಚಂದ್ರಪ್ಪ
1 min readಚಳ್ಳಕೆರೆ-ಕೋವಿಡ್-19ನಲ್ಲಿ ರಾಜ್ಯ, ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. 25ಸಂಸದರು ಪ್ರಧಾನಿಯೊಂದಿಗೆ ಚರ್ಚೆ ಮಾಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿದ್ದಾರೆ ಎಂದು ಮಾಜಿ ಸಂಸದ ಬಿ.ಎನ್.ಚಂದ್ರಪ್ಪಹೇಳಿದರು.
ಅವರು, ನಗರದ ಶಾಸಕರ ಭವನದಲ್ಲಿ ಆಯೋಜಿಸಿದ್ಧ ಆರೋಗ್ಯ ಹಸ್ತ ಕಾರ್ಯಕ್ರಮವನ್ನು ಉದ್ಟಾಟಿಸಿ ಮಾತನಾಡಿದರು. ಕೊರೋನಾ ಬಂದು ಹಲವಾರು ಜನರು ಸಾವನಪ್ಪುತ್ತಿದ್ದಾರೆ ಆದರೆ, ಬಿಜೆಪಿ ಸರ್ಕಾರದ ಹಲವಾರು ಸಚಿವರು, ಶಾಸಕರು ಸಾವಿನ ಮನೆಯಲ್ಲಿ ಸಂಭ್ರಮ ಆಚರಣೆ ಮಾಡುತ್ತಿರುವುದು ಶೋಚನೀಯ ಸಂಗತಿ. ಜನರಿಗೆ, ಜನಪ್ರತಿನಿಧಿಗಳಿಗೆ ವೆಂಟಿಲೇಶನ್ ಸಿಗದೆ ಸಾವನಪ್ಪುತ್ತಿದ್ದಾರೆ. ಭ್ರಷ್ಟಾಚಾರದಲ್ಲಿ ಮುಳಿರುವ ಈ ಸರ್ಕಾರದ ವಿರುದ್ಧ ಧ್ವನಿ ಎತ್ತಬೇಕು ಎಂದರು.
ಶಾಸಕ ಟಿ.ರಘುಮೂರ್ತಿ ಮಾತನಾಡಿ, ರಾಜ್ಯದ ಪ್ರತಿಯೊಂದು ಮನೆ,ಮನೆಗೆ ಕಾಂಗ್ರೆಸ್ ಕಾರ್ಯಕರ್ತರು ಬೇಟಿ ನೀಡಿ ಆರೋಗ್ಯದ ಬಗ್ಗೆ ತಪಾಸಣೆ ಮಾಡುವರು. ಕಾಂಗ್ರೆಸ್ ಪಕ್ಷದ ವತಿಯಿಂದ ಎಲ್ಲಾ ಮನೆಗಳ ಸದಸ್ಯರ ಆರೋಗ್ಯ ತಪಾಸಣೆ ನಡೆಸಲಿದ್ದಾರೆ ಇದಕ್ಕೆ ಎಲ್ಲರೂ ಸಹಕಾರ ನೀಡಿ ಎಂದರು.
ಈ ಸಂದರ್ಭದಲ್ಲಿ ಕ್ಷೇತ್ರದ ಪರಶುರಾಂಪುರಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಿರಣ್ ಶಂಕರರು ಕೆಪಿಸಿಸಿ ವತಿಯಿಂದ ವೀಕ್ಷಕರಾದ ಶುಭಾವೇಣು ಗೋಪಾಲ್, ಜಯಣ್ಣ, ಡಿಸಿಸಿ ಅಧ್ಯಕ್ಷರಾದ ತಾಜಪೀರ, ಡಾಕ್ಟರ್ ರಾಘವೇಂದ್ರ ಅವರು ತಾಲ್ಲೂಕು ಪಂಚಾಯಿತಿ ಗ್ರಾಮ ಪಂಚಾಯತಿಯ ಕೊರೊನಾ ವಾರಿಯರ್ಸ್ ಹಾಗೂ ಕಾರ್ಯಕರ್ತರಿಗೆ ಆರೋಗ್ಯ ಕಿಟ್ ಗಳನ್ನು ವಿತರಣೆ ಮಾಡಲಾಯಿತು.