September 17, 2024

Chitradurga hoysala

Kannada news portal

ಹೆಲ್ತ್ ಬುಲೆಟಿನ್: ಜಿಲ್ಲೆಯಲ್ಲಿ 37 ಜನರಿಗೆ ಕೋವಿಡ್ ಸೋಂಕು ದೃಢ : ಸೋಂಕಿತರ ಸಂಖ್ಯೆ 4,042ಕ್ಕೆ ಏರಿಕೆ

1 min read

ಚಿತ್ರದುರ್ಗ, ಸೆಪ್ಟೆಂಬರ್ 07:
   ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 37 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4,042ಕ್ಕೆ ಏರಿಕೆಯಾದಂತಾಗಿದೆ.
 ಚಿತ್ರದುರ್ಗ ತಾಲ್ಲೂಕಿನಲ್ಲಿ 07, ಚಳ್ಳಕೆರೆ 07, ಮೊಳಕಾಲ್ಮುರು 01, ಹೊಸದುರ್ಗ 17 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 05 ಸೇರಿದಂತೆ ಒಟ್ಟು 37 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
 ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಸೋಮವಾರ 73 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಸೋಮವಾರ ಒಟ್ಟು 456 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 37 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 4042ಕ್ಕೆ ಏರಿಕೆಯಾಗಿದ್ದು, ಇದುವರೆಗೆ 35 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 2,321 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1,686  ಸಕ್ರಿಯ ಪ್ರಕರಣಗಳು ಇವೆ.
  ಸದ್ಯ ಜಿಲ್ಲೆಯಲ್ಲಿ ಒಟ್ಟು 781 ಕಂಟೈನ್ಮೆಂಟ್ ವಲಯಗಳಿವೆ.  ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 30,288  ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

  ಈವರೆಗೆ 44,006 ಜನರ ಮಾದರಿ ಸಂಗ್ರಹಿಸಲಾಗಿದ್ದು, 38,839 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 683 ಜನರ ವರದಿ ಬರುವುದು ಬಾಕಿ ಇದೆ. 442 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *