April 24, 2024

Chitradurga hoysala

Kannada news portal

ಸರ್ಕಾರಿ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕ ಡಾ.ಕೆ.ಕೆ.ಕಾಮಾನಿ ಇನ್ನಿಲ್ಲ

1 min read

ಚಿತ್ರದುರ್ಗ ಸರ್ಕಾರಿ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕ ಡಾ.ಕೆ.ಕೆ.ಕಾಮಾನಿ(55) ಕೋವಿಂಡ್ ಸೋಂಕಿಗೆ ಬಲಿಯಾಗಿದ್ದಾರೆ.
ಮೃತರಿಗೆ ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಸಂಖ್ಯೆಯ ಶಿಷ್ಯ ವರ್ಗವನ್ನು, ಸ್ನೇಹಿತರನ್ನು ಅಗಲಿದ್ದಾರೆ.
ಕಳೆದ ಸೋಮವಾರದಿಂದ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಕಾಮಾನಿಯವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಸರ್ಕಾರಿ ವಿಜ್ಞಾನ ಕಾಲೇಜಿನ ಐಕ್ಯೂಎಸಿ ಸಂಚಾಲಕರಾಗಿ, ಕಾಲೇಜ್ ಅಭಿವೃದ್ಧಿಗೆ ಅವಿರತ ಶ್ರಮಿಸುತ್ತಿದ್ದ ಅವರು ವಿಶೇಷವಾಗಿ ಬಡ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿದ್ದರು.
ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಮಾಡಿಕೊಂಡೇ ಅನೇಕ ಜನಪರ ಹೋರಾಟಗಳಲ್ಲಿ ಪಾಲ್ಗೊಳ್ಳುತ್ತಿದ್ದರಲ್ಲದೆ, ವಿವಿಧ ಸಂಘ ಸಂಸ್ಥೆಗಳೊಂದಿಗೆ ಕೈ ಜೋಡಿಸಿ ಜನಪರ ಕೆಲಸ ಮಾಡುತ್ತಿದ್ದರು. ಪರಿಶಿಷ್ಟ ಜಾತಿ, ಪಂಗಡದ ಮೀಸಲಾತಿ ಹೋರಾಟದಲ್ಲೂ ಅವರು ಪಾಲ್ಗೊಂಡಿದ್ದರು. ದೇಶ ವಿದೇಶಗಳಲ್ಲಿ ಹಮ್ಮಿಕೊಳ್ಳುತ್ತಿದ್ದ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡಿ ವಿಷಯ ಮಂಡನೆ ಮಾಡುತ್ತಿದ್ದರು. ಸರಳ ಸಜ್ಜನಿಕೆ ವ್ಯಕ್ತಿತ್ವ ಡಾ.ಕಾಮಾನಿ ಅವರನ್ನು ಕಳೆದುಕೊಂಡಿರುವ ಶಿಷ್ಯ ವರ್ಗ ನೋವಿನಲ್ಲಿ ಮುಳುಗಿದೆ.
ಅಂತ್ಯ ಕ್ರಿಯೆ- 
ಮೃತರ ಅಂತ್ಯ ಕ್ರಿಯೆ ಚಿತ್ರದುರ್ಗದ ರುದ್ರಭೂಮಿಯಲ್ಲಿ ಗುರುವಾರ ಸಂಜೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

About The Author

Leave a Reply

Your email address will not be published. Required fields are marked *