ಚಿತ್ರದುರ್ಗ ಸ್ಥಳೀಯ ಲೆಕ್ಕಪರಿಶೋಧನಾ ವರ್ತುಲ ಹೊಸ ಕಛೇರಿ ನಿರ್ಮಾಣಕ್ಕೆ ಸರ್ಕಾರದಿಂದ ಒಂದು ಕೋಟಿ: ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್
1 min readಲೆಕ್ಕಪರಿಶೋಧನ ವರ್ತುಲ ಹೊಸ ಕಛೇರಿ ನಿರ್ಮಾಣಕ್ಕೆ ಒಂದು ಕೋಟಿ ಅನುದಾನ ಬಿಡುಗಡೆಗೊಳಿಸಲು ಸಹಕರಿಸಿದವರೆಲ್ಲರಿಗೂ ಚಿತ್ರದುರ್ಗ ಜಿಲ್ಲಾ ನೌಕರರ ಸಂಘದ ಅಧ್ಯಕ್ಷರಾದ ಕೆ.ಮಂಜುನಾಥ ಅಭಿನಂದಿಸಿದ್ದಾರೆ.
ಬಹಳ ದಿನಗಳ ಬೇಡಿಕೆಯಾಗಿ ಉಳಿದಿದ್ದ ಚಿತ್ರದುರ್ಗ ಸ್ಥಳೀಯ ಲೆಕ್ಕಪರಿಶೋಧನಾ ವರ್ತುಲ ಹೊಸ ಕಛೇರಿ ನಿರ್ಮಾಣಕ್ಕೆ ಸರ್ಕಾರದಿಂದ ಒಂದು ಕೋಟಿ ಮಂಜೂರಾಗಿರುವುದು ಸಂತೋಷದ ವಿಚಾರವಾಗಿದೆ. ಜಿಲ್ಲೆಯಲ್ಲಿ ಇದುವರೆಗೂ ಈ ರೀತಿಯಾದ ಪ್ರಯತ್ನಗಳು ನಡೆದರೂ ಸಹ ಹಣ ಮಂಜೂರಾಗದೇ ಕಟ್ಟಡದ ವಿಚಾರ ನೆನೆಗುದಿಗೆ ಬಿದ್ದಿತ್ತು. ಈಗ ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಲೋಕೋಪಯೋಗಿ ಸಚಿವರಾದ ಗೋವಿಂದ ಕಾರಜೋಳ, ಲೋಕೋಪಯೋಗಿ ಇಲಾಖೆ, ಕಾರ್ಯದರ್ಶಿ ಗುರುಪ್ರಸಾದ್ ಮತ್ತು ಆಂತರಿಕ ಸಲಹೆಗಾರರಾದ ಸೋಮನಾಥ್, ರಾಜ್ಯ ಲೆಕ್ಕಪರಿಶೋಧನಾ ಮತ್ತು ಲೆಕ್ಕಪತ್ರ ಇಲಾಖೆ ಪ್ರಧಾನ ನಿರ್ದೇಶಕರಾದ ಕಂದಾರಿ ಮತ್ತು ವಿಶೇಷವಾಗಿ ನಮ್ಮ ಜಿಲ್ಲೆಯ ಜನಪ್ರಿಯಾ ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ ಅವರು ಪರಿಶ್ರಮ ಫಲನೀಡಿದೆ. ಈ ಎಲ್ಲಾ ಕಾರ್ಯಕ್ಕೆ ಬೆನ್ನೆಲುಬಾಗಿ ಚಿತ್ರದುರ್ಗ ಜಿಲ್ಲೆಯ ಸರ್ಕಾರಿ ನೌಕರರ ಸಂಘದ ಹೊಸ ಯೋಜನೆಗಳ ರೂಪುರೇಷೆ ಮತ್ತು ಅನುದಾನ ಬಿಡುಗಡೆಗೆ ಅವಿರತವಾಗಿ ಶ್ರಮಿಸಿದ ಕರ್ನಾಟಕ ರಾಜ್ಯ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಷಡಾಕ್ಷರಿಯವರಿಗೆ ಮತ್ತು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದವರೆಲ್ಲರಿಗೂ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಕೆ.ಮಂಜುನಾಥ ಹಾಗೂ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಅಭಾರಿಗಳಾಗಿದ್ದಾರೆ ಎಂದು ತಿಳಿಸಿದ್ದಾರೆ.