ವಿಘ್ನೇಶ್ವರಗೆ ಕೈ ಮುಗಿಯಿರಿ ಮನೆಗೆ ನಡೆಯಿರಿ, ತಾಲೂಕಿನಾದ್ಯಂತ ಎಣ್ಣೆ ಅಂಗಡಿ ಬಂದ್.
1 min readಚಿತ್ರದುರ್ಗ: (ಸೆಪ್ಟೆಂಬರ್11) : ಸೆಪ್ಟೆಂಬರ್ 12ರಂದು ಹಿಂದೂ ಮಹಾ ಗಣಪತಿ ವಿಗ್ರಹ ವಿಸರ್ಜನಾ ಮೆರವಣಿಗೆ ಪ್ರಯುಕ್ತ ಸಾರ್ವಜನಿಕ ಶಾಂತಿ ಪಾಲನೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಮುಂಜಾಗ್ರತಾ ಸಲುವಾಗಿ ಸೆಪ್ಟೆಂಬರ್ ಇಂದು ಮಧ್ಯಾಹ್ನ 2ಗಂಟೆಯಿಂದ ಸೆಪ್ಟೆಂಬರ್ 13ರ ಬೆಳಿಗ್ಗೆ 6ಗಂಟೆಯವರೆಗೆ ಚಿತ್ರದುರ್ಗ ತಾಲ್ಲೂಕಿನಾದ್ಯಂತ ಬರುವ ಎಲ್ಲಾ ಬಗೆಯ ಮದ್ಯ ಮಾರಾಟದ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶಿಸಿದ್ದಾರೆ.
ಹಿಂದೂ ಮಹಾ ಗಣಪತಿ ವಿಸರ್ಜನೆ ಮೆರವಣೆಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ಸಂಭವ ಇರುವುದರಿಂದ, ಜಿಲ್ಲೆಯಾದ್ಯಂತ ಕೋವಿಡ್-19 ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಾರ್ಗಸೂಚಿಗಳಂತೆ ಸಾರ್ವಜನಿಕ ಶಾಂತಿ ಪಾಲನೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಚಿತ್ರದುರ್ಗ ತಾಲ್ಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.