May 21, 2024

Chitradurga hoysala

Kannada news portal

ಸೆ.15ರಂದು ಪೋಷಣ್ ರಥ ಹಾಗೂ ಜಾಗೃತಿ ಜಾಥಾಕ್ಕೆ ಚಾಲನೆ.

1 min read

ಚಿತ್ರದುರ್ಗ,ಸೆಪ್ಟೆಂಬರ್11:
 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಚಿತ್ರದುರ್ಗ ತಾಲ್ಲೂಕು ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯಡಿ  ಸೆಪ್ಟೆಂಬರ್ 15ರಂದು ಪೋಷಣ್ ರಥ ಹಾಗೂ ಜಾಗೃತಿ ಜಾಥಾ  ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು.
 ಅಂದು ಬೆಳಿಗ್ಗೆ 11ಕ್ಕೆ ಪೋಷಣ್ ಮಾಸಾಚರಣೆ ಜಾಗೃತಿ ಜಾಥಾವು ನಗರದ ಓನಕೆ ಓಬವ್ವ ವೃತ್ತದಿಂದ ಗಾಂಧಿ ವೃತ್ತದವರೆಗೆ ನಡೆಯಲಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು, ಸಂಸದ ಎ.ನಾರಾಯಣಸ್ವಾಮಿ, ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರು ಚಾಲನೆ ನೀಡಲಿದ್ದಾರೆ.
 ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶಶಿಕಲಾ ಸುರೇಶ್‍ಬಾಬು, ಉಪಾಧ್ಯಕ್ಷೆ ವಿಜಯಲಕ್ಷ್ಮೀ ಪ್ರಕಾಶ್, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ನರಸಿಂಹರಾಜು, ಕೃಷಿ ಮತ್ತು ಕೈಗಾರಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಕೌಶಲ್ಯ ತಿಪ್ಪೇಸ್ವಾಮಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ತ್ರೀವೇಣಿ ಶಿವಪ್ರಸಾದ್ ಗೌಡ, ತಾಲ್ಲೂಕು ಪಂಚಾಯತ್ ಅಧ್ಯಕ್ಷ ಡಿ.ಎಂ ಲಿಂಗರಾಜು,  ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷೆ ಶಾಂತಮ್ಮ ರೇವಣಸಿದ್ದಪ್ಪ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *