February 26, 2024

Chitradurga hoysala

Kannada news portal

ವಿಕಲಚೇತನರ ಹಾಗೂ ಪುನರ್ವಸತಿ ಕಾರ್ಯಕರ್ತರ ವಿವಿಧ ಬೇಡಿಕೆ ಒತ್ತಾಯಿಸಿ ಮನವಿ.

1 min read

ಚಿತ್ರದುರ್ಗ: ಜಿಲ್ಲೆಯ ಕರ್ನಾಟಕ ರಾಜ್ಯ ವಿಕಲಚೇತನರ ಎಂಆರ್‍ಡಬ್ಲ್ಯೂ, ವಿಆರ್‍ಡಬ್ಲ್ಯೂ, ಯುಆರ್‍ಡಬ್ಲ್ಯೂ ಕಾರ್ಯಕರ್ತರ ರಾಜ್ಯ ಒಕ್ಕೂಟ ಚಿತ್ರದುರ್ಗ ಶಾಖೆ, ಚಿತ್ರದುರ್ಗ ಜಿಲ್ಲೆ ವತಿಯಿಂದ ವಿಕಲಚೇತನರ ಹಾಗೂ ಪುನವರ್ಸತಿ ಕಾರ್ಯಕರ್ತರ ವಿವಿಧ ಬೇಡಿಕೆಗಳನ್ನು ಒತ್ತಾಯಿಸಿ ದಿನಾಂಕ:14-09-2020 ಸೋಮವಾರ ಬೆಳಿಗ್ಗೆ 11 ಗಂಟೆಗೆ ಸಾಮಾಜಿಕ ಅಂತರ, ಮಾಸ್ಕ್ ಧರಿಸಿಕೊಂಡು ಸುಮಾರು 100 ರಿಂದ 150 ಜನ ಪುನರ್ವಸತಿ ಕಾರ್ಯಕರ್ತರು ನಗರದ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲು ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದ್ದು, ಸದರಿ ರ್ಯಾಲಿಯ ಕುರಿತು ಪತ್ರಿಕಾ ಪ್ರಕಟಣೆ ಪ್ರಕಟಿಸುವಂತೆ ಹಾಗೂ ರ್ಯಾಲಿ ದಿನದಂದು ತಾವುಗಳು ಬಂದು ನಮ್ಮ ಬೇಡಿಕೆಗಳನ್ನು ಸರ್ಕಾರದ ಮಟ್ಟಕ್ಕೆ ತಿಳಿಸಬೇಕು ಎಂದು ಕರ್ನಾಟಕ ರಾಜ್ಯ ವಿಕಲಚೇತನರ ಹಾಗೂ ಎಂಆರ್‍ಡಬ್ಲ್ಯೂ, ವಿಆರ್‍ಡಬ್ಲ್ಯೂ, ಯುಆರ್‍ಡಬ್ಲ್ಯೂ ಕಾರ್ಯಕರ್ತರ ರಾಜ್ಯ ಒಕ್ಕೂಟದ ಜಿಲ್ಲಾಶಾಖೆಯ ಗೌರವ ಅಧ್ಯಕ್ಷರಾದ ಎನ್.ಮೈಲಾರಪ್ಪ, ಜಿಲ್ಲಾಧ್ಯಕ್ಷ ಡಿ.ಟಿ.ತಿಮ್ಮಾರೆಡ್ಡಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *