May 17, 2025

Chitradurga hoysala

Kannada news portal

ಜಿಲ್ಲೆಯಲ್ಲಿ 257 ಜನರಿಗೆ ಕೋವಿಡ್ ಸೋಂಕು ದೃಢ : ಸೋಂಕಿತರ ಸಂಖ್ಯೆ 4,801ಕ್ಕೆ ಏರಿಕೆ

1 min read

ಚಿತ್ರದುರ್ಗ, ಸೆಪ್ಟೆಂಬರ್12:
  ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಶನಿವಾರದ ವರದಿಯಲ್ಲಿ 257 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4,801ಕ್ಕೆ ಏರಿಕೆಯಾದಂತಾಗಿದ್ದು, ನಾಲ್ವರು ಮೃತಪಟ್ಟ ಪ್ರಕರಣ ವರದಿಯಾಗಿದೆ.  
 ಚಿತ್ರದುರ್ಗ ತಾಲ್ಲೂಕಿನಲ್ಲಿ 133, ಚಳ್ಳಕೆರೆ 41, ಹಿರಿಯೂರು 50, ಹೊಸದುರ್ಗ 14 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 19 ಸೇರಿದಂತೆ ಒಟ್ಟು 257 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
 ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಶನಿವಾರ 129 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
  ಶನಿವಾರ ಒಟ್ಟು 834 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 257 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 4,801ಕ್ಕೆ ಏರಿಕೆಯಾಗಿದ್ದು, ಇದುವರೆಗೆ 35 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 3,637 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1,129 ಸಕ್ರಿಯ ಪ್ರಕರಣಗಳು ಇವೆ.
  ಸದ್ಯ ಜಿಲ್ಲೆಯಲ್ಲಿ ಒಟ್ಟು 922 ಕಂಟೈನ್ಮೆಂಟ್ ವಲಯಗಳಿವೆ.  ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 33,581 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

  ಈವರೆಗೆ 47,986 ಜನರ ಮಾದರಿ ಸಂಗ್ರಹಿಸಲಾಗಿದ್ದು, 41,898 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 842 ಜನರ ವರದಿ ಬರುವುದು ಬಾಕಿ ಇದೆ. 445 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *