May 17, 2025

Chitradurga hoysala

Kannada news portal

ಜಿಲ್ಲೆಯಲ್ಲಿ 233 ಜನರಿಗೆ ಕೋವಿಡ್ ಸೋಂಕು ದೃಢ : ಸೋಂಕಿತರ ಸಂಖ್ಯೆ 5034 ಕ್ಕೆ ಏರಿಕೆ

1 min read

ಚಿತ್ರದುರ್ಗ, ಸೆಪ್ಟೆಂಬರ್13:
  ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ 233 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5034 ಕ್ಕೆ ಏರಿಕೆಯಾದಂತಾಗಿದ್ದು, ಒಬ್ಬರು ಮೃತಪಟ್ಟ ಪ್ರಕರಣ ವರದಿಯಾಗಿದೆ.  
 ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಭಾನುವಾರ 137 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
  ಭಾನುವಾರ ಒಟ್ಟು 851 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 233 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 5034 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 35 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 3,774 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1,225 ಸಕ್ರಿಯ ಪ್ರಕರಣಗಳು ಇವೆ.
  ಸದ್ಯ ಜಿಲ್ಲೆಯಲ್ಲಿ ಒಟ್ಟು 922 ಕಂಟೈನ್ಮೆಂಟ್ ವಲಯಗಳಿವೆ.  ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 34078 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

  ಈವರೆಗೆ 48837 ಜನರ ಮಾದರಿ ಸಂಗ್ರಹಿಸಲಾಗಿದ್ದು, 42591 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 767 ಜನರ ವರದಿ ಬರುವುದು ಬಾಕಿ ಇದೆ. 445 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *