3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಕೇಲವು ಜಿಲ್ಲೆ ರೆಡ್ ಅಲರ್ಟ್ ಘೋಷಣೆ.
1 min readಬೆಂಗಳೂರು, ಸೆಪ್ಟೆಂಬರ್ 14: ಕರ್ನಾಟಕ ರಾಜ್ಯದಲ್ಲಿ ಸೆಪ್ಟೆಂಬರ್ ಇಂದು ಸೇರಿ ಸೆ.17 ರವರೆಗೆ ಭಾರೀ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕರಾದ ಸಿ.ಎಸ್ ಪಾಟೀಲ್, ರಾಜ್ಯದ ಕರಾವಳಿ ಭಾಗದಲ್ಲಿ ಇಂದಿನಿಂದ ಸೆಪ್ಟೆಂಬರ್ 17 ರವರೆಗೆ ಅತೀ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲೂ ಕರಾವಳಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವುದಾಗಿ ತಿಳಿಸಿದ್ದಾರೆ.
ಇನ್ನು ಸೆ.14ರಿಂದ ಸೆ.17 ರವರೆಗೆ ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಕಲಬುರಗಿ, ಯಾದಗಿರಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 17ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿಲಾಗಿದೆ.
ಹಾಸನ, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದ್ದು, ಬೆಂಗಳೂರಿನಲ್ಲಿಯೂ ಭಾರೀ ಮಳೆಯಾಗುವುದಾಗಿ ತಿಳಿಸಿದ್ದಾರೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 17ರ ತನಕ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.