ಕೋವಿಡ್ ನಿಯಂತ್ರಣಕ್ಕೆ ಆರೋಗ್ಯ ಸಚಿವ ಶ್ರೀರಾಮುಲು ಮಾಡಿದ್ದೇನು ಗೊತ್ತೆ?
1 min readಬಳ್ಳಾರಿ : ರಾಜ್ಯದಲ್ಲಿ ಕೋವಿಡ್ ನಿಯಂತ್ರಣವಾಗಲಿ ಎಂದು ಹಂಪಿ ಬಳಿಯ ಯಂತ್ರೋದ್ಧಾರಕ ಆಂಜನೇಯ ದೇವಾಲಯದ ಹತ್ತಿರ ಆರೋಗ್ಯ ಸಚಿವ ಶ್ರೀರಾಮುಲು ಕೋತಿಗಳಿಗೆ ಬಾಳೆಹಣ್ಣು ನೀಡಿದ್ದಾರೆ.
ರಾಜ್ಯದಲ್ಲಿ ಸಿಎಂ ಬಿಎಸ್ ವೈ ಕೋವಿಡ್ ವಿರುದ್ಧ ಹೋರಾಟ ಮಾಡಲು ಶ್ರೀರಾಮುಲು ಅವರಿಗೆ ಅಧಿಕಾರ ನೀಡಿ 173 ದಿನಗಳು ಕಳೆದಿವೆ. ಈ ಹಿನ್ನೆಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬರಲಿ ಎಂಬ ಉದ್ದೇಶದಿಂದ ಸಚಿವರು ವಿವಿಧ ದೇವಾಲಯಗಳಲ್ಲಿ ಪೂಜಾ ಕಾರ್ಯಗಳನ್ನು ಹಮ್ಮಿಕೊಂಡಿದ್ದಾರೆ. ಅದರ ಜೊತೆ ಕೋತಿಗಳಿಗೆ ಬಾಳೆ ಹಣ್ಣು ವಿತರಿಸುವ ಕಾರ್ಯ ಮಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಚಿವರ ಆತ್ಮೀಯರು ಇದ್ದರು.