ವಿಕಲಚೇತನರಿಗೆ ಶುಲ್ಕ ಮರುಪಾವತಿ, ಸಾಧನ ಸಲಕರಣೆಗಳು ಸೇರಿ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ.
1 min read
ಚಿತ್ರದುರ್ಗ, ಸೆಪ್ಟೆಂಬರ್.16:
2020-21 ನೇ ಸಾಲಿಗೆ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರಿಗಾಗಿ ವಿವಿಧ ಸೌಲಭ್ಯಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ವಿವಿಧ ಯೋಜನೆಗಳಾದ ವಿದ್ಯಾರ್ಥಿ ವೇತನ, ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಹಾಗೂ ನಂತರದ ಉನ್ನತ ವ್ಯಾಸಂಗದಲ್ಲಿ ಶೇ.60 ಅಂಕ ಪಡೆದವರಿಗೆ ಪ್ರೋತ್ಸಾಹಧನ, ಉನ್ನತ ಶಿಕ್ಷಣ ಪಡೆಯುವ ವಿಕಲಚೇತನರಿಗೆ ಶುಲ್ಕ ಮರುಪಾವತಿ, ಸಾಧನ ಸಲಕರಣೆಗಳು ನೀಡುವುದು, ಅಂಧ ಮಹಿಳೆಗೆ ಜನಿಸುವ ಮಗುವಿನ ಪಾಲನೆಗಾಗಿ ಶಿಶುಪಾಲನಾ ಭತ್ಯೆ, ವಿವಾಹ ಪ್ರೋತ್ಸಾಹಧನ ಹಾಗೂ ಅಂಗವಿಕಲತೆ ನಿವಾರಣಾ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡವರಿಗೆ ವೈದ್ಯಕೀಯ ಪರಿಹಾರ ನಿಧಿ ಈ ಯೋಜನೆಗಳಡಿ ಪ್ರಯೋಜನ ಪಡೆಯಲು ವಿಕಲಚೇತನರು ಕಡ್ಡಾಯವಾಗಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಆಧಾರ್ ಕಾರ್ಡ್ ಲಿಂಕ್ ಮಾಡಿಸಿರುವ ಉಳಿತಾಯ ಖಾತೆ ಪುಸ್ತಕದ ಪ್ರತಿ ಹಾಗೂ ವೈದ್ಯಕೀಯ ಪ್ರಮಾಣ ಪತ್ರ, ವಿಕಲಚೇತನರ ವಿಶಿಷ್ಠ ಗುರುತಿನ ಚೀಟಿ, ಇತ್ತೀಚಿನ ಆದಾಯ ಪ್ರಮಾಣ ಪತ್ರ ಮತ್ತು ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿ, ನಿವಾಸಿ ದೃಡೀಕರಣ ಪತ್ರ ಹಾಗೂ ಇತ್ತಿಚೀನ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು.
ಈ ಯೋಜನೆಗಳ ಅರ್ಜಿ ನಮೂನೆಗಳನ್ನು ತಿತಿತಿ.ಜತಿಜsಛಿ.ಞಚಿಡಿ.ಟಿiಛಿ.iಟಿ ವೆಬ್‍ಸೈಟ್ ನಿಂದ ನೇರವಾಗಿ ಡೌನ್‍ಲೋಡ್ ಮಾಡಿಕೊಳ್ಳಬಹುದು ಅಥವಾ ತಾಲ್ಲೂಕು ಪಂಚಾಯ್ತಿಯಲ್ಲಿ ಕಾರ್ಯ ನಿರ್ವಾಹಿಸುತ್ತಿರುವ ಒಖWಗಳು/ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಕಾರ್ಯನಿರ್ವಹಿಸಿತ್ತಿರುವ ಗಿಖWs ಗಳನ್ನು ಸಂಪರ್ಕಿಸಿ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿ, ಬಾಲಭವನ ಆವರಣ, ಸ್ಟೇಡಿಯಂ ಹತ್ತಿರ, ಚಿತ್ರದುರ್ಗ ದೂ: 08194-235286 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.