September 17, 2024

Chitradurga hoysala

Kannada news portal

ಯುವ ಪರಿವರ್ತಕರ ಮತ್ತು ಯುವ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

1 min read

ಚಿತ್ರದುರ್ಗ, ಸೆಪ್ಟೆಂಬರ್.16:
ಬೆಂಗಳೂರಿನ ನಿಮ್ಹಾನ್ಸ್‍ನ ಜನ ಆರೋಗ್ಯ ಕೇಂದ್ರದ ಎಪಿಡೀಮಿಯಾಲಜಿ ವಿಭಾಗದ ವತಿಯಿಂದ ಅನುಷ್ಠಾನಗೊಂಡಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯೋಜನೆಯಾದ “ಯುವಸ್ಪಂದನ”ದಲ್ಲಿ ಯುವ ಪರಿವರ್ತಕರ ಮತ್ತು ಯುವಸಮಾಲೋಚಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಅಹ್ವಾನಿಸಲಾಗಿದೆ.
 ಶೈಕ್ಷಣಿಕ ಅರ್ಹತೆ: ಯಾವುದೇ ಪದವಿ ಹಾಗೂ ಮೇಲ್ಪಟ್ಟ ಪದವೀಧರ ಯುವಕರು ಅವಶ್ಯವಿರುವ ಕೌಶಲ್ಯ, ಸ್ಥಳೀಯ ಭಾಷೆ, ಕನ್ನಡವನ್ನು ಸ್ಪಷ್ಟವಾಗಿ ಮಾತನಾಡುವುದು, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಉತ್ತಮ ಅಂತರ್ ವ್ಯಕ್ತಿಯ ಸಂವಹನ ಕೌಶಲ್ಯ ಜೊತೆಗೆ ಸಂವಾದ ಕೌಶಲ್ಯಗಳನ್ನು ಹೊಂದಿರಬೇಕು. ಸಮುದಾಯದಲ್ಲಿ ಯುವಜನರಿಗೆ ತರಬೇತಿಯಂತಹ ಹಾಗೂ ಯುವ ಜನ ಸಂಬಂಧಿ ವಿಷಯಗಳ ಕುರಿತು ಅರಿವು ಕಾರ್ಯಕ್ರಮಗಳನ್ನು ನಡೆಸಬೇಕು.
21 ರಿಂದ 35 ವರ್ಷ ವಯೋಮಿತಿ ಹೊಂದಿರಬೇಕು. ಆಸಕ್ತಿಯುಳ್ಳವರು, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣ ಚಿತ್ರದುರ್ಗ ಇವರಿಗೆ ಸೆಪ್ಟೆಂಬರ್22ರ ಒಳಗೆ ತಮ್ಮ ಅರ್ಜಿಯನ್ನು ತಲುಪಿಸಬೇಕು. ಸಂದರ್ಶನದ ದಿನಾಂಕವನ್ನು ದೂರವಾಣಿ ಮೂಲಕ ತಿಳಿಸಲಾಗುವುದು.
 ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣ ಚಿತ್ರದುರ್ಗ ಹಾಗು ಯುವಸ್ಪಂದನ ಕಾರ್ಯಕ್ರಮದ ಕ್ಷೇತ್ರ ಸಂಪರ್ಕಾಧಿಕಾರಿಗಳಾದ ವೆಂಕೋಬ ದೂರವಾಣಿ ಸಂಖ್ಯೆ-9611069973 ಮತ್ತು ಯುವ ಪರಿವರ್ತಕರಾದ ಶೀಲಾ ದೂರವಾಣಿ ಸಂಖ್ಯೆ:8861890895 ಗೆ ಸಂಪರ್ಕಿಸಬಹುದು ಎಂದು ಯುವಜನ ಸೇವಾ ಮತ್ತು ಕ್ರೀಡಾ ಇಲಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *