ಮೋದಿ ಅವರ ಆಡಳಿತವನ್ನು ದೇಶದ ಜನರು ಮೆಚ್ಚಿದ್ದಾರೆ: ಮಹಂತೇಶ್ ನಾಯಕ.
1 min readಚಳ್ಳಕೆರೆ: ಈ ದೇಶ ಕಂಡ ಬಲಾಢ್ಯ ಪ್ರಧಾನಿ ನರೇಂದ್ರ ಮೋದಿ ಅವರ ಸೇವೆ ಅಗತ್ಯವಿದೆ ಎಂದು ರಾಜ್ಯ ಎಸ್.ಟಿ.ಮೋರ್ಚಾ ಕಾರ್ಯದರ್ಶಿ ಶ್ರೀ ಮಾಂತೇಶ್ ನಾಯಕ ಹೇಳಿದರು.
ತಾಲೂಕಿನ ಕಾಟನಾಯಕನಹಳ್ಳಿ ಗ್ರಾಮದಲ್ಲಿ ಭಾರತೀಯ ಜನತಾ ಪಾರ್ಟಿ ಮೊಳಕಾಲ್ಮೂರು ಮಂಡಲದಲ್ಲಿ ಜಿಲ್ಲಾ ಎಸ್.ಟಿ. ಮೋರ್ಚಾ ಮತ್ತು ತಾಲೂಕು ಎಸ್.ಟಿ. ಮೋರ್ಚಾ ಜೊತೆಗೂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಮತ್ತು ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಸಿ ಮಾತನಾಡಿದರು.
ದೇಶದ ಅಭಿವೃದ್ಧಿಗೆ ಮೋದಿ ಅವರ ಕೊಡುಗೆ ಅಪಾರವಾಗಿದೆ. ಮೋದಿ ಅವರು ಭವಿಷ್ಯ ದೃಷ್ಟಿಯಲ್ಲಿ ಇಟ್ಟುಕೊಂಡು ಯುವ ಸಮೂಹಕ್ಕೆ ಅನೇಕ ಕಾರ್ಯಕ್ರಮಗಳನ್ನು ತಂದಿದೆ. ಅಂದು ಭಾರತದ ವಿರುದ್ದ ಮಾತನಾಡುತ್ತಿದ್ದವರು ಇಂದು ಭಾರತಕ್ಕೆ ಶರಣಾಗಿದ್ದಾರೆ. ಇಂತಹ ಮಹಾನ್ ನಾಯಕನ ಜನ್ಮ ದಿನ ಆಚರಿಸುತ್ತಿರುವು ನಮಗೆ ಹೆಮ್ಮೆ ಅನಿಸುತ್ತಿದೆ. ಇಂತಹ ನಾಯಕನ ಆಡಳಿತ ಅವಶ್ಯವಾಗಿ ಬೇಕಿದೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಹಾಗೂ ಜಿಲ್ಲಾ ಎಸ್.ಟಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವಣ್ಣ ಹಾಗೂ ತಾಲೂಕು ಎಸ್.ಟಿ. ಮೋರ್ಚಾ ಅಧ್ಯಕ್ಷರಾದ ತಿಪ್ಪೇಸ್ವಾಮಿ ಹಾಗು ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಏನ್.ಪಿ. ಪ್ರಭಾಕರ್ ಹಾಗೂ ಉಪಾಧ್ಯಕ್ಷರಾದ ಕೃಷ್ಣಪ್ಪ ಮತ್ತು ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ವಿಜಯ್ ಹಾಗೂ ಜಿಲ್ಲಾ ರೈತ ಮೋರ್ಚಾ ಕಾರ್ಯದರ್ಶಿ ಧರಣೇಂದ್ರ ಹಾಗೂ ಎಪಿಎಂಸಿ ಮಾರುಕಟ್ಟೆ ಅಧ್ಯಕ್ಷರಾದ ಕೆಟಿ ಶ್ರೀರಾಮರೆಡ್ಡಿ ಹಾಗೂ ಓಬಿಸಿ ಮೋರ್ಚಾದ ಅಧ್ಯಕ್ಷರಾದ ಲಕ್ಷ್ಮಣ ಮತ್ತು ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಸಿದ್ದಾರ್ಥ್ ಹಾಗೂ ತಿಪ್ಪೇಸ್ವಾಮಿ ಟೈಲರ್ ಮತ್ತು ಭಾಜಪಾದ ಎಲ್ಲಾ ಪದಾಧಿಕಾರಿಗಳು ಕಾರ್ಯಕರ್ತರು ಮತ್ತು ಗ್ರಾಮಸ್ಥರು ಸೇರಿಕೊಂಡು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು.