ಹೆಲ್ತ್ ಬುಲೆಟಿನ್ 152 ಜನರಿಗೆ ಸೋಂಕು ದೃಢ, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5,638ಕ್ಕೆ ಏರಿಕೆಯಾದಂತಾಗಿದೆ.
1 min read
ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಗುರುವಾರದ ಹೆಲ್ತ್ ಬುಲೆಟಿನ್ ವರದಿಯಲ್ಲಿ 152 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5,638ಕ್ಕೆ ಏರಿಕೆಯಾದಂತಾಗಿದೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಗುರುವಾರ 50 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಗುರುವಾರ ಒಟ್ಟು 1,372 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 152 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 5,638ಕ್ಕೆ ಏರಿಕೆಯಾಗಿದ್ದು, ಇದುವರೆಗೆ 33 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 3682 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1923ಸಕ್ರಿಯ ಪ್ರಕರಣಗಳು ಇವೆ.
ಸದ್ಯ ಜಿಲ್ಲೆಯಲ್ಲಿ ಒಟ್ಟು 1,196 ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 35,413 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 51,043 ಜನರ ಮಾದರಿ ಸಂಗ್ರಹಿಸಲಾಗಿದ್ದು, 46,009 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 856 ಜನರ ವರದಿ ಬರುವುದು ಬಾಕಿ ಇದೆ. 253 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.