May 29, 2024

Chitradurga hoysala

Kannada news portal

ಮಕ್ಕಳನ್ನು ಅಪೌಷ್ಠಿಕತೆಯಂದ ನರಳದಂತೆ ನೋಡಿಕೊಳ್ಳಿ: ಶಾಸಕ ಟಿ.ರಘುಮೂರ್ತಿ

1 min read

ಚಳ್ಳಕೆರೆ: ಮಕ್ಕಳಲ್ಲಿನ ಅಪೌಷ್ಠಿಕತೆಯನ್ನು ಹೋಗಲಾಡಿಸಲು ಪ್ರಮಾಣಿಕ ಪ್ರಯತ್ನ ಮಾಡಬೇಕು ಎಂದು ಶಾಸಕ ಟಿ. ರಘುಮೂರ್ತಿ ಅಂಗನವಾಡಿ ಕಾರ‌್ಯಕರ್ತೆಯರಿಗೆ ಸಲಹೆ ನೀಡಿದರು.

ರಾಷ್ಟ್ರೀಯ ಪೋಷಣ್ ದಿನಾಚರಣೆ ಪ್ರಯುಕ್ತ ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಪೋಷಣ್ ಅಭಿಯಾನ ರಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಗ್ರಾಮೀಣ ನೈರ್ಮಲ್ಯ ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ಜನರಿಗೆ ತಿಳಿವಳಿಕೆ ನೀಡಬೇಕು ಎಂದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು, ಅಪೌಷ್ಠಿಕತೆ ಹೆಚ್ಚಳದಿಂದ ಬಾಣಂತಿ ಮತ್ತು ಮಕ್ಕಳ ಮರಣಗಳ ಸಂಖ್ಯೆ ಅಧಿಕವಾಗುತ್ತಿವೆ. ಆದ್ದರಿಂದ ಸರ್ಕಾರ ಒದಗಿಸುವ ಗೋಧಿ, ಕಡಲೆ, ಹೆಸರು ಹಾಗೂ ಹಸಿರು ಕಾಳುಗಳನ್ನು ಬಾಣಂತಿಯರಿಗೆ ತಲುಪಿಸುವುದರ ಮೂಲಕ ಪೌಷ್ಠಿಕ ಆಹಾರದ ಮಹತ್ವವನ್ನು ತಾಯಾಂದಿರುಗಳಿಗೆ ತಿಳಿಸಿಕೊಡಬೇಕು. ಪ್ರತಿ ಅಂಗನವಾಡಿ ಕೇಂದ್ರಗಳ ಕಡ್ಡಾಯವಾಗಿ ಶೌಚಾಯಗಳು ಇರಬೇಕು ತಾಲ್ಲೂಕು ಪಂಚಾಯಿತಿ ವತಿಯಿಂದ ನೇರಾಗಾ ಯೋಜನೆ ಅಡಿಯಲ್ಲಿ ಶೌಚಾಲಯಗಳನ್ನು ನಿರ್ಮಿಸಿಕೊಳ್ಳಬೇಕು ಎಂದರು.

ತಹಶೀಲ್ದಾರ್ ಎಂ. ಮಲ್ಲಿಕಾರ್ಜುನ ಮಾತನಾಡಿ, ಪ್ರಸ್ತುತ ಸಮಾಜದಲ್ಲಿ ಎಲ್ಲಾ ಹೆಣ್ಣು ಮಕ್ಕಳಿಗೂ ಅಕ್ಷರ ಜ್ಞಾನದ ಅಗತ್ಯವಿದೆ. ಆದ್ದರಿಂದ ಪ್ರತಿಯೊಬ್ಬರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವ ಸಂಕಲ್ಪ ಮಾಡಲೇಬೇಕು ಎಂದು ಪೋಷಕರಿಗೆ ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಪಿ. ಪ್ರಕಾಶಮೂರ್ತಿ ಮಾತನಾಡಿದರು. ಆಶಾ ಮತ್ತು ಅಂಗನವಾಡಿ ಕಾರ‌್ಯಕರ್ತೆಯರು ನಗರದ ಪ್ರಮುಖ ಬೀದಿಗಳಲ್ಲಿ ಅಭಿಯಾನದ ಜಾಗೃತಿ ಜಾಥಾ ನಡೆಸಿದರು.

ತಾಲ್ಲೂಕು ಪಂಚಾಯಿತಿ ಪ್ರಭಾರ ಅಧ್ಯಕ್ಷ ಎಚ್. ಆಂಜನೇಯ, ಸದಸ್ಯ ಸಮರ್ಥರಾಯ್, ವೀರೇಶ್, ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಮೋಹನ್‌ಕುಮಾರಿ, ಸರ್ಕಾರಿ ಆಸ್ಪತ್ರೆಯ ಆರೋಗ್ಯಾಧಿಕಾರಿ ತಿಪ್ಪೇಸ್ವಾಮಿ, ಎಪಿಎಂಸಿ ಮಾಜಿ ಅಧ್ಯಕ್ಷ ರೆಡ್ಡಿಹಳ್ಳಿ ಶಿವಣ್ಣ ಇದ್ದರು.

About The Author

Leave a Reply

Your email address will not be published. Required fields are marked *