ಶಾಲಾ-ಕಾಲೇಜು ಓಪನ್ ಇಲ್ಲ: ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್
1 min readಬೆಂಗಳೂರು : ಈ ಸೆಪ್ಟೆಂಬರ್ ಅಂತ್ಯದವರೆಗೂ ಶಾಲಾ-ಕಾಲೇಜುಗಳು ಆರಂಭವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಕೊರೊನಾ ಆತಂಕದ ನಡುವೆಯೂ ಸೆ. 21 ರಿಂದ ಶಾಲಾ-ಕಾಲೇಜುಗಳ ಆರಂಭವಾಗಲಿದೆ ಎಂದು ಹೇಳಲಾಗಿತ್ತು. ಆದರೆ, ದಿನದಿಂದ ದಿನಕ್ಕೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿದೆ. ಈ ಹಿನ್ನಲೆಯಲ್ಲಿ ಸದ್ಯಕ್ಕೆ ಶಾಲಾ ಕಾಲೇಜು ಆರಂಭ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ಸ್ಪಷ್ಟಪಡಿಸಿದ್ದಾರೆ.
ಸೆ. 21ರಿಂದ ಶಾಲೆ ಆರಂಭವಾಗ್ತಾವಾ..? ಎಲ್ಲಾ ಗೊಂದಲಗಳಿಗೆ ತೆರೆ
ಅಲ್ಲದೇ , ರಾಜ್ಯದಲ್ಲಿ ಕೋವಿಡ್ ಸೋಂಕಿತ ಪ್ರಕರಣ ಕಡಿಮೆಯಾಗದ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳು ಭೇಟಿ ನೀಡದಿರಲು ಪತ್ರಿಕಾ ಪ್ರಕಟಣೆ ಮೂಲಕ ಸೂಚನೆ ನೀಡಲಾಗಿದೆ.
ಸೆಪ್ಟೆಂಬರ್ 21ರಿಂದ ದೇಶಾದ್ಯಂತ 9 ರಿಂದ 12ನೇ ತರಗತಿ ಶಾಲಾ-ಕಾಲೇಜು ಆರಂಭಕ್ಕೆ ನೂತನ ಮಾರ್ಗಸೂಚಿ ಬಿಡುಗಡೆ ಮಾಡಿತ್ತು. ಅದರಂತೆ ರಾಜ್ಯದ ಸರ್ಕಾರವೂ ಸಹ ಸೆಪ್ಟೆಂಬರ್ 21ರಿಂದ 9, 10 ಹಾಗೂ 11, 12ನೇ ತರಗತಿ ಪ್ರಾರಂಭಿಸಲು ರಾಜ್ಯ ಶಿಕ್ಷಣ ಇಲಾಖೆ ಮುಂದಾಗಿತ್ತು. ಇದೀಗ ಏಕಾಏಕಿ ತನ್ನ ನಿರ್ಧಾರವನ್ನು ವಾಪಸ್ ಪಡೆದಿದೆ.