May 5, 2024

Chitradurga hoysala

Kannada news portal

ಆಡಳಿತ ನ್ಯಾಯಾಧೀಕರಣ ತರಬೇತಿ: ಅರ್ಜಿ ಆಹ್ವಾನ

1 min read

ಚಿತ್ರದುರ್ಗ, ಸೆಪ್ಟೆಂಬರ್22:
ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2020-21ನೇ ಸಾಲಿಗೆ ಆಡಳಿತ ನ್ಯಾಯಾಧೀಕರಣದಲ್ಲಿ  ತರಬೇತಿ ನೀಡಲು ಪರಿಶಿಷ್ಟ ಜಾತಿಯ ಕಾನೂನು ಪದವೀಧರರನ್ನು ಆಯ್ಕೆ ಮಾಡಲು ಪರಿಶಿಷ್ಟ  ಜಾತಿಯ ಅರ್ಹ ಕಾನೂನು ಪದವೀಧರರಿಂದ ಜುಲೈ 01ರಿಂದ ನವೆಂಬರ್ 30ರ ವರೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
  ಸಂಬಂಧಪಟ್ಟ ಕಾನೂನು ಪದವೀಧರರು ಅರ್ಜಿಯನ್ನು ಇಲಾಖಾ ವೆಬ್‍ಸೈಟ್ www.sw.kar.nic.in ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಿದೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಚಿತ್ರದುರ್ಗ ಇಲ್ಲಿಗೆ ಸಂಪರ್ಕಿಸಲು ತಿಳಿಸಿದೆ.

ಷರತ್ತುಗಳು: ಅರ್ಜಿ ಸಲ್ಲಿಸಲು  ನಿಗಧಿಪಡಿಸಿದ ಕೊನೆಯ ದಿನಾಂಕಕ್ಕೆ ಕಾನೂನು ಪದವಿಯನ್ನು ಪಡೆದು 02 ವರ್ಷ ಮೀರಿರಬಾರದು. ತರಬೇತಿಯನ್ನು ಜಿಲ್ಲೆಯಲ್ಲಿಯೇ ಪಡೆಯಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದಂದು ಅಭ್ಯರ್ಥಿಯ ವಯಸ್ಸು 40 ವರ್ಷ ಮೀರಿರಬಾರದು. ಆಯ್ಕೆ ಮಾಡಲಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಸರ್ಕಾರಿ ಆದೇಶ ರೀತ್ಯಾ ರೂ.10,000/-ಗಳ ಶಿಷ್ಯ ವೇತನವನ್ನು ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್, ಸರ್ಕಾರಿ ವಕೀಲರು ಅಥವಾ 20 ವರ್ಷಗಳ ಕಾಲ ಕಡಿಮೆ ಇಲ್ಲದ ವಕೀಲ ವೃತ್ತಿಯಲ್ಲಿ ಸೇವೆ ಸಲ್ಲಿಸಿರುವ ನ್ಯಾಯಾವಾದಿಗಳ ಬಳಿ ತರಬೇತಿ ಪಡೆಯುತ್ತೀರಿ ಎಂಬ ಬಗ್ಗೆ ಲಿಖಿತ ರೂಪದಲ್ಲಿ ತಿಳಿಸಿರಬೇಕು. ತರಬೇತಿಯ ಅವಧಿ 02 ವರ್ಷವಿದ್ದು, ಆಯ್ಕೆಯಾದ ಅಭ್ಯರ್ಥಿಗಳು ಮಧ್ಯದಲ್ಲಿ ಬಿಡುವುದಿಲ್ಲ ಎಂದು, ಒಂದು ವೇಳೆ ಬಿಟ್ಟರೆ ತರಬೇತಿ ಅವಧಿಯಲ್ಲಿ  ಪಡೆದಿರುವ ಶಿಷ್ಯ ವೇತನವನ್ನು ಶೇ 10ರೂಗಳ ಬಡ್ಡಿಯೊಂದಿಗೆ ಸರ್ಕಾರಕ್ಕೆ ಹಿಂತಿರುಗಿಸಿ ಮರುಪಾವತಿ ಮಾಡುವುದಾಗಿ ಮುಚ್ಚಳಿಕೆ ಬರೆದುಕೊಡಬೇಕು. ಈ ನಿಯಮ ರಾಜ್ಯ ಮತ್ತು ಕೇಂದ್ರ ಸರ್ಕಾರದಲ್ಲಿ ನೌಕರಿ ಪಡೆದರೆ ಅನ್ವಯಿಸುವುದಿಲ್ಲ. ಆಯ್ಕೆಯಾದ ಅಭ್ಯರ್ಥಿಗಳು ಸುಳ್ಳು ಮಾಹಿತಿ ಹಾಗೂ ಸುಳ್ಳು ದಾಖಲೆಗಳನ್ನು ನೀಡಿ ಆಯ್ಕೆಯಾಗಿ ಶಿಷ್ಯ ವೇತನ ಪಡೆದರೆ ಅಂತಹ ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ಪಡೆದ ಶಿಷ್ಯ ವೇತನವನ್ನು ಒಟ್ಟಿಗೆ ಶೇ.10ರೂಗಳ ಬಡ್ಡಿಯಲ್ಲಿ ಸರ್ಕಾರಕ್ಕೆ ಹಿಂತಿರುಗಿಸಿ ಕಟ್ಟಬೇಕು ತಪ್ಪಿದರೆ ಭೂ ಕಂದಾಯ ಬಾಕಿ ವಸೂಲಿಯಂತೆ ವಸೂಲಿ ಮಾಡಲಾಗುತ್ತದೆ. ಸಂದರ್ಶನ ನಡೆಸುವ ಸ್ಥಳ ಮತ್ತು ದಿನಾಂಕವನ್ನು ಅಂಚೆಯ ಮೂಲಕ ತಿಳಿಸಲಾಗುತ್ತದೆ. ಆಯ್ಕೆಯನ್ನು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಪರಿಶೀಲಿಸಲಾಗುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *