May 3, 2024

Chitradurga hoysala

Kannada news portal

ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ.

1 min read

ಚೆನ್ನೈ: ಕೊರೋನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಮತ್ತೆ ತೀವ್ರ ಚಿಂತಾಜನಕ ಸ್ಥಿತಿಯಲ್ಲಿದೆ ಎಂದು ವರದಿಯಾಗಿದೆ.

ಈ ಕುರಿತಂತೆ ಎಂಜಿಎಂ ಆಸ್ಪತ್ರೆ ಮಾಹಿತಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಎಸ್’ಪಿಬಿ ಅವರ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿದ್ದು, ಗರಿಷ್ಠ ಲೈಫ್ ಸಪೋರ್ಟ್ ನೀಡಲಾಗಿದೆ. ಆಸ್ಪತ್ರೆಯ ತಜ್ಞರ ತಂಡ ಅವರ ಆರೋಗ್ಯ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಿದೆ.

ಕೊರೋನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಕಳೆದ ಆಗಸ್ಟ್‌ 5ರಂದು ಆಸ್ಪತ್ರೆಗೆ ದಾಖಲಾಗಿದ್ದ ಎಸ್’ಪಿಬಿ ಅವರು ಈಗಲೂ ಇಸಿಎಂಒ ಮತ್ತು ಲೈಫ್ ಸಪೋರ್ಟ್ ನಲ್ಲಿದ್ದಾರೆ ಎಂದು ಆಸ್ಪತ್ರೆ ಹೇಳಿದೆ.

ವೈದ್ಯರ ಸಲಹೆಯಂತೆ ಎಂ.ಜಿ.ಆರ್. ಹೆಲ್ತ್ ಕೇರ್ ಆಸ್ಪತ್ರೆಗೆ ದಾಖಲಾಗಿದ್ದ ಎಸ್’ಪಿಬಿಯವರ ಆರೋಗ್ಯ ಸ್ಥಿತಿ ಹಠಾತ್ ಕುಸಿತಗೊಂಡ ಕಾರಣದಿಂದ ಅವರನ್ನು ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

About The Author

Leave a Reply

Your email address will not be published. Required fields are marked *