ಗಾನ ನಿಲ್ಲಿಸಿದ ಎಸ್ ಪಿಬಿ: ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಇನ್ನಿಲ್ಲ.
1 min readಚೆನ್ನೈ: ಕೊರೋನಾ ಸೋಂಕಿಗೆ ಒಳಗಾಗಿ ಎಂಪಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಇಂದು ವಿಧಿವಶರಾಗಿದ್ದಾರೆ.
ಕೊರೋನಾ ಸೋಂಕಿನ ಪರಿಣಾಮ ಕಳೆದ ಕೆಲವು ವಾರಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಎಸ್’ಪಿಬಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ ಅಧಿಕೃತ ಹೇಳಿಕೆ ತಿಳಿಸಿದೆ.
ಕೊರೋನಾ ಪಾಸಿಟಿವ್ ಹಿನ್ನೆಲೆಯಲ್ಲಿ ಆಗಸ್ಟ್ 5ರಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಡುವೆ ಕೆಲವು ದಿನ ಅವರ ಆರೋಗ್ಯ ಸ್ಥಿತಿ ಚಿಂತಾಜನಕ ಸ್ಥಿತಿಯಲ್ಲಿತ್ತು. ಆದರೆ, ಕೊರೋನಾ ನೆಗೆಟಿವ್ ಬಂದು ಅವರ ಆರೋಗ್ಯ ಚೇತರಿಕೆ ಕಂಡುಬಂದಿತ್ತು. ಕಳೆದ ನಾಲ್ಕೈದು ದಿನಗಳಿಂದ ಈಚೆಗೆ ಅವರ ಆರೋಗ್ಯ ಬಹಳಷ್ಟು ಚೇತರಿಕೆ ಕಂಡು ಬಂದಿದ್ದು, ಆದಷ್ಟು ಶೀಘ್ರ ಅವರನ್ನು ಮನೆಗೆ ಕರೆದುಕೊಂಡು ಹೋಗು ವಿಶ್ವಾಸವನ್ನೂ ಸಹ ವ್ಯಕ್ತಪಡಿಸಿದ್ದರು. ಆದರೆ, ಇಂದು ಏಕಾಏಕಿ ಅವರ ಆರೋಗ್ಯ ತೀವ್ರ ಚಿಂತಾಜನಕ ಸ್ಥಿತಿ ತಲುಪಿಸಿತ್ತು. ಅವರನ್ನು ಗರಿಷ್ಠ ಲೈಫ್ ಸಪೋರ್ಟ್‌ನಲ್ಲಿ ಇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಕೋಟ್ಯಂತರ ಅಭಿಮಾನಿಗಳನ್ನು ಎಸ್’ಪಿಬಿ ಅಗಲಿದ್ದಾರೆ.