ಜಿಲ್ಲೆಯಲ್ಲಿ 141 ಜನರಿಗೆ ಕೋವಿಡ್ ಸೋಂಕು ದೃಢ : ಸೋಂಕಿತರ ಸಂಖ್ಯೆ 6952ಕ್ಕೆ ಏರಿಕೆ
1 min readಚಿತ್ರದುರ್ಗ, ಸೆಪ್ಟೆಂಬರ್28:
ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 141 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6,952ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಸೋಮವಾರ 233 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಸೋಂಕಿತರ ಪೈಕಿ ಈಗಾಗಲೆ 5685 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1267 ಸಕ್ರಿಯ ಪ್ರಕರಣಗಳು ಇವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
=============