ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಿಸಿದ ಸಚಿವ ಬಿ.ಶ್ರೀರಾಮುಲು
1 min read
ಮೊಳಕಾಲ್ಮುರು: ಮೊಳಕಾಲ್ಮುರು ಪಟ್ಟಣದ ತಾಲೂಕು ಪಂಚಾಯತ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ , ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2019-20 ನೇ ಸಾಲಿನ ಇಲಾಖೆ ಅನುದಾನದಲ್ಲಿ ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ (ರೆಟ್ರೋಫಿಟ್ ಮೆಂಟ್ ಸಹಿತ) ವಾಹನಗಳ ವಿತರಣಾ ಕಾರ್ಯಕ್ರಮದಲ್ಲಿ ವಿಕಲಚೇತನರಿಗೆ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಸಚಿವರಾದ ಬಿ.ಶ್ರೀರಾಮುಲು ಅವರು ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿದರು.
ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ 17 ಫಲಾನುಭವಿಗಳಿಗೆ ವಾಹನಗಳನ್ನು ವಿತರಣೆ ಕಾರ್ಯಕ್ರಮ ಮಾಡಲಾಯಿತು
ಹಾಗೂ 2 ಫಲಾನುಭವಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್ ವಿತರಿಸಲಾಯಿತು.ಹಾಗೂ
ವಿಕಲಚೇತನ ವ್ಯಕ್ತಿಯನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗೆ ನೀಡುವ ವಿವಾಹ ಪ್ರೋತ್ಸಾಹ ಧನ ಯೋಜನೆಯಡಿಯಲ್ಲಿ 50000/- ಬಾಂಡ್ ವಿತರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ವಿಕಲಚೇತನರ ಕಲ್ಯಾಣಧಿಕಾರಿ ಜೆ.ವೈಶಾಲಿ, ತಹಶೀಲ್ದಾರ್ ಮಲ್ಲಿಕಾರ್ಜುನ್, ತಾಲೂಕು ಪಂಚಾಯತ ಇಒ ಪ್ರಕಾಶ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕಾಂತರಾಜ್, ಸಿಪಿಐ ಉಮೇಶ್ ನಾಯಕ, ಪಿಎಸ್ಐ ಬಸವರಾಜ್,ಸಿಡಿಪಿಒ ಸವಿತಾ, ಮೊಳಕಾಲ್ಮುರು ಮಂಡಲ ಅಧ್ಯಕ್ಷ ಡಾ.ಮಂಜುನಾಥ್,