May 23, 2024

Chitradurga hoysala

Kannada news portal

ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ, ನೀತಿ ಸಂಹಿತೆ ಇಂದಿನಿಂದಲೇ ಜಾರಿ

1 min read

ಚಿತ್ರದುರ್ಗ, ಸೆಪ್ಟೆಂಬರ್29:
   ಚುನಾವಣಾ ಆಯೋಗವು ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾಗಿದ್ದು ಸೆಪ್ಟೆಂಬರ್ 29 ರಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ಚಿತ್ರದುರ್ಗ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.
 ಆಗ್ನೇಯ ಪದವೀಧರರ ಕ್ಷೇತ್ರದವು ಚಿತ್ರದುರ್ಗ ಜಿಲ್ಲೆಯನ್ನು ಒಳಗೊಂಡಿರುತ್ತದೆ. ಅಕ್ಟೋಬರ್ 1ರಿಂದ 8 ರ ವರೆಗೆ ನಾಮಪತ್ರ ಸಲ್ಲಿಸಲು ಹಾಗೂ ಅಕ್ಟೋಬರ್ 9 ರಂದು ನಾಮಪತ್ರಗಳ ಪರಿಶೀಲನೆ, ಅಕ್ಟೋಬರ್ 12 ನಾಮಪತ್ರಗಳ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು ಅಕ್ಟೋಬರ್ 28 ರಂದು ಮತದಾನ ನಡೆಯಲಿದೆ. ನವಂಬರ್ 2 ರಂದು ಮತ ಎಣಿಕೆ ನಡೆಯಲಿದ್ದು ನವಂಬರ್ 5 ಕ್ಕೆ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದ್ದು ಅಲ್ಲಿಯವರೆಗೆ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ. 

About The Author

Leave a Reply

Your email address will not be published. Required fields are marked *