ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯಗೆ ಕೋವಿಡ್ ದೃಢ.
1 min readಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಅವರು, ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಾಣಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ 10ನೇ ಬಾರಿಗೆ ಕೋವಿಡ್ ಪರೀಕ್ಷೆ ಮಾಡಿಸಿದ್ದು, ವರದಿ ಕೊರೊನಾ ಪಾಸಿಟಿವ್ ಬಂದಿದೆ. ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದ ಎಲ್ಲಾರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸುತ್ತೇನೆ. CBC, RFT, LFT, ECG, ಸಿಟಿ ಸ್ಕ್ಯಾನ್, ಡಿ ಡೈಮರ್, LDH, Serum Ferricin ಹಾಗು CRP ಈ ಎಲ್ಲಾ ಪರೀಕ್ಷೆಗಳನ್ನು ವೈದ್ಯರು ಮಾಡಿದ್ದು ಯಾವುದೇ ತೊಂದರೆ ಇಲ್ಲ’ ಎಂದಿದ್ದಾರೆ.