ಚಿತ್ರದುರ್ಗ ನಗರಸಭೆ: ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
1 min readಚಿತ್ರದುರ್ಗ, ಸೆಪ್ಟೆಂಬರ್30:
ಚಿತ್ರದುರ್ಗ ನಗರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಗಳನ್ನು ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 23 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
2020-21ನೇ ಸಾಲಿನ ನಗರಸಭೆ ನಿಧಿಯ ಶೇ.24.10, ಶೇ.7.25 ಮತ್ತು ಶೇ 5ರ ಯೋಜನೆಗಳಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ, ಖಾಯಂ, ಹೊರಗುತ್ತಿಗೆ ಪೌರಕಾರ್ಮಿಕರಿಗೆ, ಇತರೆ ಜನಾಂಗದವರಿಗೆ ಹಾಗೂ ವಿಕಲಚೇತನರ ಕಲ್ಯಾಣ ಕಾರ್ಯಕ್ರಮಗಳಡಿ ಯಂತ್ರಚಾಲಿತ ತ್ರಿಚಕ್ರ ವಾಹನ ಖರೀದಿಸಿ ನೀಡುವುದು. ಶಸ್ತ್ರ ಚಿಕಿತ್ಸೆಗೆ ಒಳಗಾಗುವ ಫಲಾನುಭವಿಗಳಿಗೆ ಯಶಸ್ವಿನಿ ಯೋಜನೆಯಡಿ ಗುರುತಿಸಲ್ಪಟ್ಟ ದವಾಖಾನೆಗಳಿಗೆ ಸಹಾಯಧನ ನೀಡುವುದು. ಇತರೆ ಜನಾಂಗದ ಬಿ.ಎ, ಬಿ.ಎಸ್ಸಿ, ಬಿಕಾಂ, ಎಂ.ಎ, ಎಂಎಸ್ಸಿ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲಾಗುವುದು.
ಕ್ರೀಡಾ ವಿಜೇತರಿಗೆ ಪ್ರೋತ್ಸಾಹಧನ, ವೈದ್ಯಕೀಯ ಪದವಿಯಲ್ಲಿ ತೇರ್ಗಡೆಯಾದ ಎಂಬಿಬಿಎಸ್, ಅಲೋಪತಿ ವೈದ್ಯೆ, ಆಯುರ್ವೇದ, ಹೋಮಿಯೋಪತಿ ವೃತ್ತಿ ಪ್ರಾರಂಭಿಸಲು ವೈದ್ಯಕೀಯ ಸಲಕರಣೆ ಖರೀದಿಸಿ ನೀಡಲಾಗುವುದು. ಇತರೆ ವಿವಿಧ ಸೌಲಭ್ಯಗಳನ್ನು ಒದಗಿಸಲು ಜಿಲ್ಲಾಧಿಕಾರಿಗಳು ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಿರುವುದರಿಂದ ವಿವಿಧ ಸೌಲಭ್ಯಗಳನ್ನು ಕಲ್ಪಿಸುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿವಿಧ ಸೌಲಭ್ಯಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಸೂಚನಾ ಫಲಕ ಅಥವಾ ಕಚೇರಿ ವೇಳೆಯಲ್ಲಿ ವಿಷಯ ನಿರ್ವಾಹಕರನ್ನು ಅಥವಾ ನಗರಸಭೆಯ ವೆಬ್‍ಸೈಟ್ www.chitradurgacity.mrc.gov.in ಅನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ. ನಿಗಧಿತ ಅರ್ಜಿ ನಮೂನೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯಕ್ತ ಜೆ.ಟಿ.ಹನುಮಂತರಾಜು ತಿಳಿಸಿದ್ದಾರೆ.