ಜಿಲ್ಲೆಯಲ್ಲಿ 44 ಜನರಿಗೆ ಕೋವಿಡ್ ಸೋಂಕು ದೃಢ : ಸೋಂಕಿತರ ಸಂಖ್ಯೆ 7273 ಕ್ಕೆ ಏರಿಕೆ
1 min readಚಿತ್ರದುರ್ಗ, ಸೆಪ್ಟೆಂಬರ್30:
ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ 44 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 7273 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಬುಧವಾರ 146 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಸೋಂಕಿತರ ಪೈಕಿ ಈಗಾಗಲೆ 6212 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1061 ಸಕ್ರಿಯ ಪ್ರಕರಣಗಳು ಇವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರ