ಪ್ರತಿಷ್ಠಿತ ಖಾಸಗಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ
1 min readಚಿತ್ರದುರ್ಗ,ಅಕ್ಟೋಬರ್.01-
ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ವ್ಯಾಸಂಗಕ್ಕಾಗಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
2019-20 ನೇ ಸಾಲಿನಲ್ಲಿ 5 ನೇ ತರಗತಿ ತೇರ್ಗಡೆಯಾಗಿ 6 ನೇ ತರಗತಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯಿಂದ ಅಕ್ಟೋಬರ್ 27 ರೊಳಗಾಗಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 29 ರೊಳಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಸೈನ್ಸ್ ಕಾಲೇಜು ಎದುರು, ಚಿತ್ರದುರ್ಗ ಇಲ್ಲಿಗೆ ಕಳುಹಿಸಲು ಹಾಗೂ ಹೆಚ್ಚಿನ ಮಾಹಿತಿಗೆ 08194-222937 ದೂರವಾಣಿಗೆ ಸಂಪರ್ಕಿಸಲು ಕೋರಲಾಗಿದೆ.