September 17, 2024

Chitradurga hoysala

Kannada news portal

ಕೆನರಾ ಬ್ಯಾಂಕ್ ಸಿಬ್ಬಂದಿಗಳಿಂದ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯ.

1 min read

ಚಿತ್ರದುರ್ಗ:ನಗರದ ಬಿ.ಡಿ.ರಸ್ತೆಯ ಕೆನರಾ ಬ್ಯಾಂಕ್ ಶಾಖೆಯ ಸಿಬ್ಬಂದಿ ವರ್ಗದವರಿಂದ ಗಾಂಧಿ ಜಯಂತಿ ಅಂಗವಾಗಿ ಅಕ್ಟೋಬರ್ 2 ರಂದು ಸ್ವಚ್ಛತಾ ಹೀ ಸೇವಾ ಅಭಿಯಾನ ಆಚರಿಸಲಾಯಿತು.
ನಗರದ ಬಿ.ಡಿ.ರಸ್ತೆ ಹಾಗೂ ಜೆಸಿಆರ್ ಬಡಾವಣೆಯ ಗಣಪತಿ ದೇಗುಲದ ಉದ್ಯಾನವನದಲ್ಲಿ ಕೆನರಾ ಬ್ಯಾಂಕ್ ಸಿಬ್ಬಂದಿಯು ಸ್ವಚ್ಛತಾ ಕಾರ್ಯ ಕೈಗೊಂಡರು.
ಈ ಸಂದರ್ಭದಲ್ಲಿ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಸಿ.ಬಿ.ಹಿರೇಮಠ್, ಕೆನರಾ ಬ್ಯಾಂಕ್ ಚಿತ್ರದುರ್ಗ ಶಾಖೆಯ ಮುಖ್ಯ ವ್ಯವಸ್ಥಾಪಕ ಸಾಯಿ ಕುಮಾರ್, ಬ್ಯಾಂಕ್ ಸಿಬ್ಬಂದಿಗಳಾದ ನಾಗಪ್ಪ, ಶ್ರೀನಿವಾಸ್, ವಿಜಯಕುಮಾರ್ ಸೇರಿದಂತೆ ಮತ್ತಿರರರು ಭಾಗವಹಿಸಿದ್ದರು.

About The Author

Leave a Reply

Your email address will not be published. Required fields are marked *