ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿ ಉರಿದ ಕಾರು.
1 min readಧಾರವಾಡ :ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡದ ಸುವರ್ಣ ಪೆಟ್ರೋಲ್ ಬಂಕ್ ಬಳಿ ತಡರಾತ್ರಿ ನಡೆದ ಘಟನೆ ಇದಾಗಿದ್ದು, ಹಠಾತ್ ಬೆಂಕಿ ಕಾಣಿಸಿಕೊಂಡು ಕಾರು ಹೊತ್ತಿ ಉರಿದ ಪರಿಣಾಮ ಸ್ಥಳದಲ್ಲಿ ಕೆಲ ಕಾಲ ಆತಂಕ ಉಂಟಾಗಿತ್ತು.
ನವನಗರದಿಂದ ಧಾರವಾಡ ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ಕಾರಿನಲ್ಲಿ ಹಠಾತ್ ಆಗಿ ಬೆಂಕಿ ಕಾಣಿಸಿಕೊಂಡಿದೆ.
ತಕ್ಷಣ ಎಚ್ಚೆತ್ತ ಸ್ಥಳಿಯರು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಇದರಿಂದಾಗಿ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ.
ವಸೀಂ ಷಾ ಕಿತ್ತೂರು ಎಂಬುವವರಿಗೆ ಸೇರಿದ ಕಾರು ಇದಾಗಿದ್ದು, ಹಠಾತ್ ಬೆಂಕಿ ಕಾಣಿಸಿಕೊಂಡ ಪರಿಣಾಮಅವರು ಕೂಡ ಕೆಲ ಕಾಲ ಗಲಿಬಿಲಿಗೊಂಡಿದ್ದರು.
ಜೈಲಾನಿ ಖಾಜಿ ಹಾಗೂ ಸ್ಥಳಿಯ ಪೆಟ್ರೋಲ್ ಬಂಕ್ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಇದಕ್ಕೆ ಸಾಥ್ ನೀಡಿದರು.