ಶಿರಾ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಕಲ್ಕೆರೆ ರವಿಕುಮಾರ್ ಕಾಂಗ್ರೆಸ್ ಸೇರ್ಪಡೆ ಟಿಬಿಜೆ ಗೆ ಮತ್ತಷ್ಟು ಬಲ
1 min readತುಮಕೂರು, ಅಕ್ಟೋಬರ್ 4: ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ದಿನ ಕಳೆದಂತೆ ರಂಗೇರುತ್ತಿದ್ದು, ಜೆಡಿಎಸ್ ಟಿಕೆಟ್ ಆಕಾಂಕ್ಷಿ ಕಲ್ಕೆರೆ ರವಿಕುಮಾರ್ ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ಇದರಿಂದ ಕೈ ಅಭ್ಯರ್ಥಿ ಜಯಚಂದ್ರ ಅವರ ಗೆಲುವಿಗೆ ದಾರಿ ಸುಲಭವಾಗುತ್ತದೆ ಎನ್ನಬಹುದು.
ತುಮಕೂರು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್ ಅವರ ಪತಿ ಕಲ್ಕೆರೆ ರವಿಕುಮಾರ್, ಶಿರಾ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಹಿಂದಿನ ವಿಧಾನಸಭಾ ಚುನಾವಣೆಯಲ್ಲಿಯೂ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಆಗಿದ್ದರು.
ಉಪ ಚುನಾವಣೆಯಲ್ಲಾದರೂ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದ ರವಿಕುಮಾರ್, ಟಿಕೆಟ್ ದೊರೆಯದ ಕಾರಣ ಇಂದು ದಿಢೀರನೆ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಶಿರಾದಲ್ಲಿ ಜೆಡಿಎಸ್ ಟಿಕೆಟ್ ಗಾಗಿ ಪ್ರಬಲವಾಗಿ ಪ್ರಯತ್ನ ನಡೆಸಿದ್ದರು. ಆದರೆ ಬದಲಾದ ರಾಜಕೀಯ ಬದಲಾವಣೆಯಲ್ಲಿ ಇಂದು ತನ್ನ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ.