May 29, 2024

Chitradurga hoysala

Kannada news portal

ವಿಕಲಚೇತನ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ: ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

1 min read

ಚಿತ್ರದುರ್ಗ, ಅಕ್ಟೋಬರ್05:
ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ, ಸಲ್ಲಿಸುತ್ತಿರುವ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಕ್ಟೋಬರ್ 15 ಅರ್ಜಿ ಸಲ್ಲಿಸಲು ಕೊನೆಯ ದಿನ.
  ವಿಶ್ವ ಸಂಸ್ಥೆಯ ನಿರ್ದೇಶನಾನುಸಾರ ಪ್ರತಿ ವರ್ಷ ಡಿಸೆಂಬರ್ 03 ರಂದು ವಿಶ್ವ ವಿಕಲಚೇತನರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಪ್ರತಿ ವರ್ಷ ಸರ್ಕಾರದ ವತಿಯಿಂದ ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ, ಸಲ್ಲಿಸುತ್ತಿರುವ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಿಕ್ಷಕರಿಗೆ ‘’ರಾಜ್ಯ ಪ್ರಶಸ್ತಿ’’ ನೀಡಿ ಗೌರವಿಸಲಾಗುತ್ತದೆ.
ಪ್ರಸ್ತುತ 2020-21ನೇ ಸಾಲಿಗೆ ವಿವಿಧ ಕ್ಷೇತ್ರಗಳಲ್ಲಿ (ಶಿಕ್ಷಣ, ಸಾಹಿತ್ಯ, ಕಲಾ, ಕಾನೂನು, ಪ್ರತಿಭೆ, ಕ್ರೀಡೆ ಸಮಾಜ ಸೇವಾ ಕ್ಷೇತ್ರ)ದಲ್ಲಿ ಸಾಧನೆಗೈದ ವಿಕಲಚೇತನರಿಗೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸಂಸ್ಥೆಗಳಿಗೆ ಮತ್ತು ವಿಶೇಷ ಶಾಲೆಗಳಲ್ಲಿ  15  ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸುತ್ತಿರುವ, ಸಲ್ಲಿಸಿರುವ ವಿಶೇಷ ಶಿಕ್ಷಕರುಗಳಿಂದ ರಾಜ್ಯ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  
ಅರ್ಜಿ ನಮೂನೆಗಳನ್ನು ಇಲಾಖೆಯಿಂದ ಅಥವಾ ವೆಬ್ ವಿಳಾಸ ತಿತಿತಿ.ಜತಿಜsಛಿ.ಞಚಿಡಿ.ಟಿiಛಿ.iಟಿ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು ಪ್ರಸ್ತಾವನೆಗಳೊಂದಿಗೆ ಅಕ್ಟೋಬರ್ 15ರೊಳಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಚಿತ್ರದುರ್ಗ ಈ ಕಚೇರಿಗೆ ದ್ವಿ ಪ್ರತಿಯಲ್ಲಿ ಸಲ್ಲಿಸಲು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಸ್ಟೇಡಿಯಂ ಹತ್ತಿರ, ಚಿತ್ರದುರ್ಗ ಹಾಗೂ ದೂರವಾಣಿ ಸಂಖ್ಯೆ 08194-235286ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ

About The Author

Leave a Reply

Your email address will not be published. Required fields are marked *