ಜಿಲ್ಲೆಯಲ್ಲಿ 210 ಜನರಿಗೆ ಕೋವಿಡ್ ಸೋಂಕು ದೃಢ : ಸೋಂಕಿತರ ಸಂಖ್ಯೆ 7,693ಕ್ಕೆ ಏರಿಕೆ
1 min readಚಿತ್ರದುರ್ಗ, ಅಕ್ಟೋಬರ್05:
ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 210 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 7,693ಕ್ಕೆ ಏರಿಕೆಯಾದಂತಾಗಿದೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಸೋಮವಾರ 84 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಸೋಮವಾರ ಒಟ್ಟು 590 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 210 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 7,693ಕ್ಕೆ ಏರಿಕೆಯಾಗಿದ್ದು, ಇದುವರೆಗೆ 37 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 7,467 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 719 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 63,248 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.