ದಿವಂಗತ ಸುರೇಶ್ ಅಂಗಡಿ ಮನೆಗೆ ರಾಜ್ಯಪಾಲ ವಾಜುಭಾಯ್ ವಾಲಾ ಭೇಟಿ
1 min readಬೆಳಗಾವಿ : ಕೇಂದ್ರದ ರೈಲ್ವೆ ಇಲಾಖೆಯ ರಾಜ್ಯ ಸಚಿವರಾಗಿದ್ದ ದಿವಂಗತ ಸುರೇಶ್ ಅಂಗಡಿ ಅವರ ನಿವಾಸಕ್ಕೆ ಸೋಮವಾರ ಅ.5 ರಂದು ರಾಜ್ಯಪಾಲರಾದ ವಾಜುಭಾಯ್ ವಾಲಾ ಅವರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಬೆಳಗಾವಿಯಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿದ ರಾಜ್ಯಪಾಲರು ಸುರೇಶಅಂಗಡಿ ಅವರ ತಾಯಿ ಸೋಮವ್ವ, ಪತ್ನಿ ಮಂಗಳ, ಇಬ್ಬರು ಪುತ್ರಿಯರಿಗೆ ಧೈರ್ಯ ತುಂಬಿದರು.
ಈ ವೇಳೆ ಬೆಳಗಾವಿ ಜಿಲ್ಲಾಧಿಕಾರಿ ಎಂಜಿ ಹಿರೇಮಠ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.