May 14, 2024

Chitradurga hoysala

Kannada news portal

ಜಿಲ್ಲೆಯಲ್ಲಿ 164 ಜನರಿಗೆ ಕೋವಿಡ್ ಸೋಂಕು ದೃಢ : ಸೋಂಕಿತರ ಸಂಖ್ಯೆ 8,110ಕ್ಕೆ ಏರಿಕೆ.

1 min read

ಚಿತ್ರದುರ್ಗ, ಅಕ್ಟೋಬರ್07:
ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ 164 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 8,110ಕ್ಕೆ ಏರಿಕೆಯಾದಂತಾಗಿದೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಬುಧವಾರ 153 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಬುಧವಾರ ಒಟ್ಟು 1,155 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 164 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 8,110ಕ್ಕೆ ಏರಿಕೆಯಾಗಿದ್ದು, ಇದುವರೆಗೆ 37 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 7,958 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 645 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 67,927 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

ಈವರೆಗೆ 72,132 ಜನರ ಮಾದರಿ ಸಂಗ್ರಹಿಸಲಾಗಿದ್ದು, 63,399 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 152 ಜನರ ವರದಿ ಬರುವುದು ಬಾಕಿ ಇದೆ. 471 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *