ಚಳ್ಳಕೆರೆಯಲ್ಲಿ ಮನಿಷಾ ಆತ್ಯಾಚಾರ ಕೊಲೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
1 min readಚಳ್ಳಕೆರೆ-09
ಉತ್ತರ ಪ್ರದೇಶದ ದಲಿತ ಯುವತಿ ಮನಿಷಾ ವಾಲ್ಮೀಕಿ ಮೇಲೆ ಅತ್ಯಾಚಾರ, ಕೊಲೆ ಮತ್ತು ಉತ್ತರ ಪ್ರದೇಶ ಸರ್ಕಾರದಲ್ಲಿ ಹೆಣ್ಣು ಮಕ್ಕಳ, ಮಹಿಳೆಯರ ರಕ್ಷಣೆ ಮಾಡುವಲ್ಲಿ ಸಂಪೂರ್ಣ ವಿಫಲ ಮತ್ತು ಡಿ.ಕೆ. ಶಿವಕುಮಾರ್ ಅವರ ಮನೆ ಮೇಲಿ ಸಿಬಿಐ ದಾಳಿ ಖಂಡಿಸಿ ಶುಕ್ರವಾರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಯುವ ಘಟಕದ ಅಧ್ಯಕ್ಷ ಕೆ.ಎಂ.ಶಿವಕುಮಾರಸ್ವಾಮಿ ಮಾತನಾಡಿ, ಉಪ ಚುನಾವಣೆ ವೇಳೆ ಡಿ.ಕೆ. ಶಿವಕುಮಾರ್ ಹಾಗೂ ಸಹೋದರ ಡಿ.ಕೆ.ಸುರೇಶ್ ಅವರ ರಾಜಕೀಯ ಶಕ್ತಿಗೆ ಬದರಿ ರಾಜಕೀಯ ಪ್ರೇರಿತ ದಾಳಿಯಾಗಿದೆ. ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಶ್ರೀಮಾನ್ಯ ತಾಸಿಲ್ದಾರ್ ರವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಚಳ್ಳಕೆರೆ ವಿಧಾನಸಭಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಟಿ.ತಿಪ್ಪೇಸ್ವಾಮಿ, ಕಿರಣ್ ಶಂಕರ್, ತಾಲೂಕು ಪಂಚಾಯಿತಿ ಅಧ್ಯಕ್ಷರಾದ ಕೆ ತಿಪ್ಪೇಸ್ವಾಮಿ, ತಾಲೂಕು ಪಂಚಾಯಿತಿ ಸದಸ್ಯರಾದ ಗಿರಿಯಪ್ಪ, ತಿಮ್ಮಾರೆಡ್ಡಿ, ಕಾಂಗ್ರೆಸ್ ಮುಖಂಡರಾದ ಟಿ ಪ್ರಭುದೇವ್.ಸೈಯದ್, ಅನ್ವರ್ ಮಾಸ್ಟರ್, ಕೃಷ್ಣಮೂರ್ತಿ, ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸಿಎಂ ಶಿವಕುಮಾರಸ್ವಾಮಿ, ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷರಾದ ಕರಿಕೆರೆ ಡಿ ರಾಜಪ್ಪ, ಜಿಲ್ಲಾ ಕಾಂಗ್ರೆಸ್ ಎಸ್ಟಿ ಘಟಕದ ಉಪಾಧ್ಯಕ್ಷರಾದ ರಾಜ ಸುಮನ್ ಪಟೇಲ್, ಯುವ ಕಾಂಗ್ರೆಸ್ ಮುಖಂಡರಾದ ಸಿಬಿ ಶಿವರಾಜ ದೇವ, ದರ್ಶನ್, ಓಬಯ್ಯ, ಹಳೆ ಟೌನ್ ಬದ್ರಿ, ಮಂಜುನಾಥ, ಯಲಗಟ್ಟೆ ಗೊಲ್ಲರಹಟ್ಟಿ ವೀರೇಶ ಈ, ನಗರಸಭಾ ಸದಸ್ಯರುಗಳಾದ ಭದ್ರಪ್ಪ, ಕೆಳಕೆರಪ್ಪ,ವಿರುಪಾಕ್ಷಿ,ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರಸನ್ನಕುಮಾರ್ ಇನ್ನು ಮುಂತಾದವರು ಭಾಗವಹಿಸಿದ್ದರು