May 14, 2024

Chitradurga hoysala

Kannada news portal

ಜಿಲ್ಲೆಯಲ್ಲಿ 381 ಜನರಿಗೆ ಕೋವಿಡ್ ಸೋಂಕು ದೃಢ : ಸೋಂಕಿತರ ಸಂಖ್ಯೆ 8,673ಕ್ಕೆ ಏರಿಕೆ

1 min read

ಜಿಲ್ಲೆಯಲ್ಲಿ 381 ಜನರಿಗೆ ಕೋವಿಡ್ ಸೋಂಕು ದೃಢ : ಸೋಂಕಿತರ ಸಂಖ್ಯೆ 8,673ಕ್ಕೆ ಏರಿಕೆ
ಚಿತ್ರದುರ್ಗ, ಅಕ್ಟೋಬರ್09:
   ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಶುಕ್ರವಾರದ ವರದಿಯಲ್ಲಿ 381 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 8,673ಕ್ಕೆ ಏರಿಕೆಯಾಗಿದೆ.
 ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಶುಕ್ರವಾರ 203 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಶುಕ್ರವಾರ ಒಟ್ಟು 1389 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 381 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 8,673ಕ್ಕೆ ಏರಿಕೆಯಾಗಿದ್ದು, ಇದುವರೆಗೆ 39 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 8,207 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 959 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 75,394 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
  ಈವರೆಗೆ 74,561 ಜನರ ಮಾದರಿ ಸಂಗ್ರಹಿಸಲಾಗಿದ್ದು, 65,350 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 61 ಜನರ ವರದಿ ಬರುವುದು ಬಾಕಿ ಇದೆ. 477 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *