ಸಮರ್ಥ ಸಚಿವ ಶ್ರೀರಾಮುಲುಗೆ ಸಮಾಜ ಕಲ್ಯಾಣ ಇಲಾಖೆ?
1 min readಬೆಂಗಳೂರು: ರಾಜ್ಯದ ಪ್ರಭಾವಿ ಸಚಿವ ಬಿ.ಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಇಲಾಖೆ ಖಾತೆ ಫಿಕ್ಸ್ . ಮುಖ್ಯಮಂತ್ರಿ ಅಧಿಕೃತ ಘೋಷಣೆ ಅಷ್ಟೇ ಬಾಕಿ.
ಕಳೆದ ವೇಳೆ ವಿಧಾನ ಸಭಾ ಚುನಾವಣೆಯಲ್ಲಿ ಡಿಸಿಎಂ ಆಗುವ ನಿರೀಕ್ಷಿಸಲಾಗಿತ್ತು. ಆದರೆ ಸರ್ಕಾರ ರಚನೆ ಆಗದ ಕಾರಣ ಅಗಿರಲಿಲ್ಲ. ನಾಯಕ ಜನಾಂಗಕ್ಕೆ ಡಿಸಿಎಂ ಸ್ಥಾನ ಅಥವಾ ಸಮಾಜ ಕಲ್ಯಾಣ ಇಲಾಖೆ ನೀಡಬೇಕು ಎಂಬ ಶ್ರೀರಾಮುಲು ಅಭಿಮಾನಿಗಳು ಮತ್ತು ನಾಯಕ ಜನಾಂಗದ ಒತ್ತಾಯಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಂದಿಸಿದಂತೆ ಕಾಣುತ್ತಿದ್ದು. ಸಚಿವ ಸುಧಾಕರ್ ಗೆ ವೈದ್ಯಕೀಯ ಶಿಕ್ಷಣ ಜೊತೆಗೆ ಆರೋಗ್ಯ ಖಾತೆ ನೀಡುತ್ತಾರೆ. ಗೋವಿಂದ ಕಾರಜೋಳ ಬಳಿರುವ ಎರಡು ಪ್ರಬಲ ಖಾತೆಗಳಾದ ಪಿಡ್ಲೂಡಿ ಮತ್ತು ಸಮಾಜ ಕಲ್ಯಾಣ ಖಾತೆ ಇದ್ದು. ಇದರಲ್ಲಿ ರಾಮುಲುಗೆ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಜೊತೆಗೆ ಸಮಾಜ ಕಲ್ಯಾಣ ಇಲಾಖೆ ಖಾತೆ ನೀಡುವ ತಿರ್ಮಾನಕ್ಕೆ ಮುಖ್ಯಮಂತ್ರಿ ಬಂದಿದ್ದಾರೆ ಎಂಬುದು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ. ಆರೋಗ್ಯ ಇಲಾಖೆಯಲ್ಲಿ ಸಮರ್ಥವಾಗಿ ನಿರ್ವಹಿಸಿ ಮಾದರಿಯಾಗಿದ್ದ ರಾಮುಲು ಸಮಾಜ ಕಲ್ಯಾಣ ಇಲಾಖೆ ಸಿಕ್ಕರೆ ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ , ಹಿಂದುಳಿದ ವರ್ಗಗಳ ಏಳ್ಗೆಗೆ ಶ್ರಮಿಸಿ ಹೆಚ್ಚಿಗೆ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯ ಎಲ್ಲೆಡೆ ಕೇಳಿ ಬರುತ್ತಿದೆ.