ಹೆಲ್ತ್ ಬುಲೆಟಿನ್: ಕೋವಿಡ್ ಓಟ ಜಿಲ್ಲೆಯಲ್ಲಿ 392 ಜನರಿಗೆ ಕೋವಿಡ್ ಸೋಂಕು ದೃಢ : ಸೋಂಕಿತರ ಸಂಖ್ಯೆ 9652 ಕ್ಕೆ ಏರಿಕೆ.
1 min readಚಿತ್ರದುರ್ಗ, ಅಕ್ಟೋಬರ್11:
ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ 382 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 9652 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಭಾನುವಾರ 957 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಭಾನುವಾರ ಒಟ್ಟು 1543 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 392 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 9652ಕ್ಕೆ ಏರಿಕೆಯಾಗಿದ್ದು, ಇಂದು 4 ಜನರು ಮೃತಪಟ್ಟಿದ್ದು ಇದುವರೆಗೆ 45 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 8177 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1383 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 74010 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.