ಬೇಟೆಗಾರರ ಬೇಟೆಯಾಡುವಲ್ಲಿ ಅರಣ್ಯ ಇಲಾಖೆ ತಂಡ ಯಶಸ್ವಿ 7 ಮಂದಿ ಬಂಧನ
1 min readಅಕ್ರಮವಾಗಿ ಕಾಡು ಪ್ರಾಣಿಗಳ ಬೇಟೆಯಾಡಲು ಬಂದಿದ್ದ 7 ಮಂದಿ ಆರೋಪಿಗಳನ್ನು ನಾಲ್ಕು ಬಂದೂಕು, ಪಿಸ್ತೂಲ್, ಸೇರಿದಂತೆ ಇತರೆ ವಾಹನಗಳನ್ನು ಅರಣ್ಯ ಇಲಾಖೆ ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ.
ಹಿರಿಯೂರು ತಾಲೂಕಿನ ಕಾಡಿನಂಚಿನಲ್ಲಿ ಅಕ್ರಮವಾಗಿ ಕಾಡು ಪ್ರಾಣಿಗಳ ಬೇಟೆಯಾಡಲು ಏಳು ಮಂದಿ ಬೇಟೆಗಾರರು ಬಂದಿರುವ ಖಚಿತ ಮಾಹಿತಿ ಪಡೆದ ಅರಣ್ಯಾಧಿಕಾರಿಗಳು ಮತ್ತು ವನ್ಯಜೀವಿ ಪರಿಪಾಲಕರು ಕೂಡಲೇ ಕಾರ್ಯ ಪ್ರವೃತ್ತರಾಗಿ ಇಡೀ ಅರಣ್ಯ ಪ್ರದೇಶವನ್ನು ಎರಡು ಸಲ ವೀಕ್ಷಣೆ ಮಾಡಿ ಖಚಿತಪಡಿಸಿಕೊಂಡಿದ್ದಾರೆ. ನಂತರ ಆರೋಪಿಗಳು ತಂದಿದ್ದ ಅತ್ಯಾಧುನಿಕ ನಾಲ್ಕು ಬಂದೂಕುಗಳನ್ನು, ಒಂದು ಪಿಸ್ತೂಲ್, bow ಅಂಡ್ arrow, HIGH FALSH LIGHTS ಹಾಗೂ ಬೇಟೆಗೆ ಉಪಯೋಗಿಸುವ ಹಲವಾರು ಉಪಕರಣಗಳು, ಬೇಟೆಗಾರರ ಎರಡು ಮಹಿಂದ್ರ ಜೀಪ್ ಹಾಗೂ ಮಹಿಂದ್ರ ಸ್ಕಾರ್ಪಿಯೋ ವಾಹನಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.
ಬಂಧಿತ 7 ಮಂದಿ ಆರೋಪಿಗಳು ಶಿವಮೊಗ್ಗ, ಬೆಂಗಳೂರು ಮೂಲದವರಾಗಿದ್ದು ಪ್ರಮುಖ ನಾಲ್ಕು ಮಂದಿ ಬೇಟೆಗಾಗರರು ಮತ್ತು ಮೂರು ಮಂದಿ ವಾಹನಗಳ ಚಾಲಕರಾಗಿದ್ದಾರೆ. ಬೇಟೆಗಾರರನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿದೆ.
ಚಿತ್ರದುರ್ಗ ಜಿಲ್ಲಾ ಗೌರವ ವನ್ಯಜೀವಿ ಪರಿಪಾಲಕರಾದ ರಘುರಾಮ್ HG, ಹಿರಿಯೂರು ವಲಯ ಅರಣ್ಯಾಧಿಕಾರಿ ಶ್ರಿಹರ್ಷ, ಉಪ ವಲಯ ಅರಣ್ಯಾಧಿಕಾರಿ ಪ್ರದೀಪ್ ಕೇಸರಿ ಮತ್ತು ಸಿಬ್ಬಂದಿಗಳು ನೇರವಾಗಿ ದಾಳಿ ನಡೆಸಿ ಬೇಟೆಗಾರರನ್ನು ಹಿಡಿಯಲು ಯಶಸ್ವಿಯಾಗಿದ್ದಾರೆ. ಈ ಕಾರ್ಯಾಚರಣೆಯಲ್ಲಿ CCF ಲಿಂಗರಾಜು ಬೆನ್ನೆಲುಬಾಗಿ ನಿಂತು ಮಾರ್ಗದರ್ಶನ ನೀಡಿದ್ದಾರೆ.