April 24, 2024

Chitradurga hoysala

Kannada news portal

ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ: ಅಕ್ಟೋಬರ್ 28ರಂದು ಜಿಲ್ಲೆಯ 32 ಮತಗಟ್ಟೆಗಳಲ್ಲಿ ಮತದಾನ

1 min read

ಚಿತ್ರದುರ್ಗ, ಅಕ್ಟೋಬರ್14:
 ವಿಧಾನ ಪರಿಷತ್ ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಅಕ್ಟೋಬರ್ 28 ರಂದು ಮತದಾನ ನಡೆಯಲಿದ್ದು ಜಿಲ್ಲೆಯ 32 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ.  
 ಜಿಲ್ಲೆಯ ಆರು ತಾಲ್ಲೂಕುಗಳು ಆಗ್ನೇಯ ಪದವೀಧರರ ಕ್ಷೇತ್ರದ ವ್ಯಾಪ್ತಿಗೆ ಒಳಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು 21,021 ಮತದಾರರು  ಇದ್ದಾರೆ. ಹೆಚ್ಚುವರಿ ಮತಗಟ್ಟೆಗಳು ಸೇರಿದಂತೆ ಒಟ್ಟು 32 ಮತಗಟ್ಟೆಗಳಿವೆ. ಮೊಳಕಾಲ್ಮುರು 03, ಚಳ್ಳಕೆರೆ 06, ಚಿತ್ರದುರ್ಗ 08, ಹಿರಿಯೂರು 06, ಹೊಸದುರ್ಗ 05 ಹಾಗೂ ಹೊಳಲ್ಕೆರೆ 04 ಮತಗಟ್ಟೆಗಳಿವೆ.
ಮೊಳಕಾಲ್ಮುರು ತಾಲ್ಲೂಕಿನಲ್ಲಿ ಕಸಬಾ ಹೋಬಳಿಗೆ ಸಂಬಂಧಿಸಿದಂತೆ ಮೊಳಕಾಲ್ಮುರಿನ ತಹಶೀಲ್ದಾರ್ ಕಚೇರಿಯ ಸಭಾಂಗಣ ಹಾಗೂ ಸರ್ವೇ ಇಲಾಖೆಯ ಕಚೇರಿಯಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ದೇವಸಮುದ್ರ ಹೋಬಳಿಗೆ ಸಂಬಂಧಿಸಿದಂತೆ ರಾಂಪುರದ ಗದ್ದೆ ವೀರಭದ್ರಪ್ಪ ಸರ್ಕಾರಿ ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ. ಮೊಳಕಾಲ್ಮೂರು ತಾಲ್ಲೂಕಿನಲ್ಲಿ 3 ಮತಗಟ್ಟೆಗಳಿದ್ದು ಒಟ್ಟು 1,451 ಮತದಾರರಿದ್ದಾರೆ.
 ಚಳ್ಳಕೆರೆ ತಾಲ್ಲೂಕಿನಲ್ಲಿ ಕಸಬಾ ಹೋಬಳಿಗೆ ಸಂಬಂಧಿಸಿದಂತೆ ಚಳ್ಳಕೆರೆಯ ಬಿಸಿನೀರು ಮುದ್ದಪ್ಪ ಸರ್ಕಾರಿ ಪ್ರೌಢಶಾಲೆ ರೂಂ ನಂ-1 ಹಾಗೂ ಬಿಸಿನೀರು ಮುದ್ದಪ್ಪ ಸರ್ಕಾರಿ ಪ್ರೌಢಶಾಲೆ ರೂಂ ನಂ-2, ಬಿಸಿನೀರು ಮುದ್ದಪ್ಪ ಸರ್ಕಾರಿ ಪ್ರೌಢಶಾಲೆ ರೂಂ ನಂ-3 ರಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಪರಶುರಾಂಪುರ ಹೋಬಳಿಗೆ ಸಂಬಂಸಿದಂತೆ ಪರಶುರಾಂಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ. ನಾಯಕನಹಟ್ಟಿ ಹೋಬಳಿಗೆ ಸಂಬಂಧಿಸಿದಂತೆ ನಾಯಕನಹಟ್ಟಿಯ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ. ತಳಕು ಹೋಬಳಿಗೆ ಸಂಬಂಧಿಸಿದಂತೆ ತಳುಕಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ. ಚಳ್ಳಕೆರೆ ತಾಲ್ಲೂಕಿನಲ್ಲಿ ಒಟ್ಟು 06 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಒಟ್ಟು 4,313  ಮತದಾರರಿದ್ದಾರೆ.
 ಚಿತ್ರದುರ್ಗ ತಾಲ್ಲೂಕಿನಲ್ಲಿ ಕಸಬಾ ಹೋಬಳಿಗೆ ಸಂಬಂಧಿಸಿದಂತೆ ಚಿತ್ರದುರ್ಗ ನಗರದ ಬಿ.ಡಿ.ರಸ್ತೆಯ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ರೂಂ-1 ಹಾಗೂ ಚಿತ್ರದುರ್ಗ ನಗರದ ಬಿ.ಡಿ.ರಸ್ತೆಯ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ರೂಂ-2, ಚಿತ್ರದುರ್ಗ ನಗರದ ಬಿ.ಡಿ.ರಸ್ತೆಯ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ರೂಂ-3, ಚಿತ್ರದುರ್ಗ ನಗರದ ಬಿ.ಡಿ.ರಸ್ತೆಯ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ರೂಂ-4, ಚಿತ್ರದುರ್ಗ ನಗರದ ಬಿ.ಡಿ.ರಸ್ತೆಯ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ರೂಂ-5ರಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಹಿರೇಗುಂಟನೂರು ಹೋಬಳಿಗೆ ಸಂಬಂಧಿಸಿದಂತೆ ಹಿರೇಗುಂಟನೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ. ಭರಮಸಾಗರ  ಹೋಬಳಿಗೆ ಸಂಬಂಧಿಸಿದಂತೆ ಭರಮಸಾಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ. ತುರುವನೂರು ಹೋಬಳಿಗೆ ಸಂಬಂಧಿಸಿದಂತೆ ತುರುವನೂರಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮತಗಟ್ಟೆ ಸ್ಥಾಪಿಸಲಾಗಿದ್ದು,  ಚಿತ್ರದುರ್ಗ ತಾಲ್ಲೂಕಿನಲ್ಲಿ ಒಟ್ಟು 08 ಮತಗಟ್ಟೆಗಳಿದ್ದು,  ಒಟ್ಟು  6,275 ಮತದಾರರಿದ್ದಾರೆ.
ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿಗೆ ಸಂಬಂಧಿಸಿದಂತೆ ಧರ್ಮಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ. ಕಸಬಾ ಹೋಬಳಿಗೆ ಸಂಬಂಧಿಸಿದಂತೆ ಹಿರಿಯೂರಿನ ಮುಖ್ಯರಸ್ತೆಯ ಆಸ್ಪತ್ರೆ ಸಮೀಪದಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜು ರೂಂ. 1, ಹಿರಿಯೂರಿನ ಮುಖ್ಯರಸ್ತೆಯ ಆಸ್ಪತ್ರೆ ಸಮೀಪದಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜು ರೂಂ. 2, ಹಿರಿಯೂರಿನ ಮುಖ್ಯರಸ್ತೆಯ ಆಸ್ಪತ್ರೆ ಸಮೀಪದಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜು ರೂಂ. 3ರಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಐಮಂಗಲ ಹೋಬಳಿಗೆ ಸಂಬಂಧಿಸಿದಂತೆ ಐಮಂಗಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ. ಜೆ.ಜಿ.ಹಳ್ಳಿ ಹೋಬಳಿಗೆ ಸಂಬಂಧಿಸಿದಂತೆ ಜೆ.ಜಿ.ಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆಯನ್ನು ಸ್ಥಾಪಿಸಲಾಗಿದೆ. ಹಿರಿಯೂರು ತಾಲ್ಲೂಕಿನಲ್ಲಿ ಒಟ್ಟು 06 ಮತಗಟ್ಟೆಗಳಿದ್ದು, 4,487 ಮತದಾರರಿದ್ದಾರೆ.
 ಹೊಸದುರ್ಗ ತಾಲ್ಲೂಕಿನ ಕಸಬಾ ಹೋಬಳಿಗೆ ಸಂಬಂಧಿಸಿದಂತೆ ಹೊಸದುರ್ಗ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲೆ ವಿಭಾಗ ಹಳೆ ಕಟ್ಟಡ) ರೂಂ.1, ಹೊಸದುರ್ಗ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲೆ ವಿಭಾಗ ಹಳೆ ಕಟ್ಟಡ) ರೂಂ.2ರಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮಾಡದಕೆರೆ ಹೋಬಳಿಗೆ ಸಂಬಂಧಿಸಿದಂತೆ ಮಾಡದಕರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ. ಶ್ರೀರಾಂಪುರ ಹೋಬಳಿಗೆ ಸಂಬಂಧಿಸಿದಂತೆ ಶ್ರೀರಾಂಪುರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ. ಮತ್ತೋಡು ಹೋಬಳಿಗೆ ಸಂಬಂಧಿಸಿದಂತೆ ಮತ್ತೋಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ. ಹೊಸದುರ್ಗ ತಾಲ್ಲೂಕಿನಲ್ಲಿ ಒಟ್ಟು 05 ಮತಗಟ್ಟೆಗಳಿದ್ದು, 2,472 ಮತದಾರರಿದ್ದಾರೆ.
 ಹೊಳಲ್ಕೆರೆ ತಾಲ್ಲೂಕಿನ ಕಸಬಾ ಹೋಬಳಿಗೆ ಸಂಬಂಸಿದಂತೆ ಹೊಳಲ್ಕೆರೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಉರ್ದು ಶಾಲೆಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ. ಬಿ.ದುರ್ಗ ಹೋಬಳಿಗೆ ಸಂಬಂಧಿಸಿದಂತೆ ಬಿ.ದುರ್ಗದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ. ರಾಮಗಿರಿ ಹೋಬಳಿಗೆ ಸಂಬಂಧಿಸಿದಂತೆ ರಾಮಗಿರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ. ತಾಳ್ಯ ಹೋಬಳಿಗೆ ಸಂಬಂಧಿಸಿದಂತೆ ತಾಳ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ. ಹೊಳಲ್ಕೆರೆ ತಾಲ್ಲೂಕಿನಲ್ಲಿ 04 ಮತಗಟ್ಟೆಗಳಿದ್ದು, 2,023 ಮತದಾರರಿದ್ದಾರೆ. 

About The Author

Leave a Reply

Your email address will not be published. Required fields are marked *